No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌

ಜು.3ರಿಂದ 14ರವರೆಗೆ ಅಧಿವೇಶನ | ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡನೆ

kalpa News by kalpa News
June 22, 2023
in ಬೆಂಗಳೂರು ನಗರ
0
ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ಈ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ UTKhader ಅವರು ತಿಳಿಸಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಮತ್ತು ಯುವಜನರ ಆಲೋಚನೆಗಳು,ದೂರದೃಷ್ಟಿ,ಪ್ರತಿಭೆ ಬಿಂಬಿಸಲು ನಮ್ಮ ಸಚಿವಾಲಯದ ಮುಖಾಂತರ 03ದಿವಸಗಳ ಕಾಲ ಪ್ರಕೃತಿ ಮತ್ತು ತರಬೇತಿ ಶಿಬಿರವನ್ನು ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ನಡೆಸಲಾಗುತ್ತದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದ್ದು,ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮನವಿ ಮಾಡಿದರು.

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು(ಕಾರ್ಯಕ್ರಮಗಳು) ನಡೆಯಲಿವೆ ಎಂದರು.

ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು.
ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ.  ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು,ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಆರೋಗ್ಯ,ದೈಹಿಕ, ಮಾನಸಿಕ ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.
ಜು.3ರಿಂದ ಅಧಿವೇಶನ ಆರಂಭ:
16ನೇ ವಿಧಾನಸಭೆಯ ೦1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದ್ದು, ಜು.14ರವರೆಗೆ 10ದಿನಗಳ ಕಾಲ ನಡೆಯಲಿದೆ. ಜು.03ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.  ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನ ಅಂಗೀಕರಿಸಲಾಗುತ್ತದೆ.
ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 08 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು,ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: . UTKhaderBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಯು.ಟಿ. ಖಾದರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

65 ವರ್ಷ ಮೇಲ್ಪಟ್ಟವರಿಗೆ ಮುಜರಾಯಿ ದೇಗುಲಗಳಲ್ಲಿ ನೇರ ದರ್ಶನ: ಆದರೆ ಈ ದಾಖಲೆ ಬೇಕು

Next Post

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

kalpa News

kalpa News

Next Post
ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL