ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ಶೇಕಡಾ 30ರಷ್ಟು ಲಾಭಾಂಶದ ಹಣ 3,62,77,412 ರೂ. ಅನ್ನು ಇಂದು ಮುಖ್ಯಮಂತ್ರಿಗಳ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್, KSSIDC ಯ ಅಧ್ಯಕ್ಷ ಕಳಕಪ್ಪ ಬಂಡಿ, ಉಪಾಧ್ಯಕ್ಷ ಎಸ್. ದತ್ತಾತ್ರಿ, ವ್ಯವಸ್ಥಾಪಕ ನಿರ್ದೇಶಕರಾದ (MD) ಸಿ. ಸತ್ಯಭಾಮಾ, ಕಂಪನಿ ಸೆಕ್ರೆಟರಿ ದೀರೆನ್, ನಿರ್ದೇಶಕರುಗಳಾದ ಎಸ್.ಸಿ. ಪಾಟೀಲ್, ಕೆ. ನಾರಾಯಣ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post