No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಪ್ರತಿಪಕ್ಷ ನಾಯಕ ಅಶೋಕ್ ಆಕ್ರೋಶ

ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿರುವ ರೋಗದ ನಿಯಂತ್ರಣಕ್ಕೆ ಸಮರೋಪಾದಿ ಕ್ರಮ ಅಗತ್ಯ

kalpa News by kalpa News
February 7, 2024
in ಬೆಂಗಳೂರು ನಗರ
0
ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ KFD (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ R Ashok ಆರೋಪಿಸಿದ್ದಾರೆ.

ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ.

ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಾಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವರ್ಷ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅರಮನೆ ಕೊಪ್ಪದ ಯುವತಿ ಅನನ್ಯ(18) ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಧರೇಕೊಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯಗೌಡ (79) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿಯಲ್ಲಿ ರೋಗ ಕಾಣಿಸಿಕೊಂಡ ಬಗ್ಗೆ ವರದಿಗಳಿವೆ.

Also read: ಶೀಘ್ರ ಕಿರುತೆರೆಯಲ್ಲಿ `ಸೂರ್ಯವಂಶ’ದ ಘರ್ಜನೆ | ಅನಿರುದ್ ಮಾಸ್ ಎಂಟ್ರಿಯ ಟ್ರೇಲರ್ ವೈರಲ್

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು, ಶೃಂಗೇರಿ ಮತ್ತು ಕೊಪ್ಪ ಭಾಗದ ಅನೇಕ ಗ್ರಾಮಗಳಲ್ಲಿ ಒಂದೇ ದಿನಕ್ಕೆ ಹತ್ತು-ಹದಿನೈದು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡು ಭೀತಿ ಮೂಡಿಸಿದೆ. ಅರಣ್ಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮುನ್ನೇಚ್ಚರಿಕೆ ಕ್ರಮವಾಗಿ ಯಾರೂ ಹೊರಗೆ ಹೋಗಬೇಡಿ ಅನ್ನುತ್ತಾರೆ. ಮಲೆನಾಡಿನ ಜನ ಸೌದೆ,ಸೊಪ್ಪು,ದರಗು, ದನಕರುಗಳ ಕಾರಣಕ್ಕೆ ಕಾಡುಮೇಡು ಸುತ್ತಾಡಲೇಬೇಕು,. ಇಷ್ಟಕ್ಕೂ ಕಾಫಿ,ಅಡಕೆ ತೋಟ, ಹೊಲಗದ್ದೆಗಳಿಗೆ ಕಾಲಿಡದಿರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
Kalahamsa Infotech private limitedಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್ ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ರೋಗದ ಕಾಲಾವಧಿ 3 ರಿಂದ 8 ದಿನ ಆಗಿರುತ್ತದೆ. ಹೀಗಾಗಿ ರೋಗದ ಲಕ್ಷಣಗಳಾದ ವಾಕರಿಕೆ, ವಾಂತಿ, ಸ್ನಾಯು ಬಿಗಿತ, ಮಾನಸಿಕ ಅಸ್ವಸ್ಥತೆ, ನಡುಕ, ದೃಷ್ಟಿ ಮಂದವಾಗುವುದು ಹಾಗೂ ತೀವ್ರ ತಲೆನೋವು ಪೈಕಿ ಯಾವುದೇ ಲಕ್ಷಣ ಕಾಣಿಸುತ್ತಿದ್ದಂತೆ ಅವರನ್ನು ತಾಲ್ಲೂಕು ಅಥವಾ ಜಿಲ್ಲೆ ಆಸ್ಪತ್ರೆಗೆ ಕರೊದೊಯ್ದು ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು. ಅದಕ್ಕೆ ಮುಂಚೆ ಕಾಡಿನಂಚಿನ ಗ್ರಾಮಗಳಲ್ಲಿ ಅರಿವು ಮೂಡಿಸುವುದು, ಲಸಿಕೆ ಹಾಕುವುದು ಮತ್ತು ರೋಗ ತಪಾಸಣೆ ಮಾಡುವ ಕೆಲಸ ಆಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ಸ್ನಾತಕೋತ್ತರ ವೈದ್ಯ ವಿಭಾಗದ ವಿದ್ಯಾರ್ಥಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದಿದ್ದಾರೆ.

ಬೆಂಗಳೂರಿನ ಆರೋಗ್ಯ ಭವನದಲ್ಲಿ ಠಿಕಾಣಿ ಹೂಡಿರುವ ಹಿರಿಯ ಅಧಿಕಾರಿಗಳನ್ನು ತಕ್ಷಣ ನೋಡಲ್ ಅಧಿಕಾರಿಗಳಾಗಿ ಮೂರು ಜಿಲ್ಲೆಗಳಿಗೆ ನೇಮಕ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು ಎಂದೂ ಅಶೋಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರಿಹಾರ ಕೊಡಿ
ಈಗಾಗಲೇ ಕೆ ಎಫ್ ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

       

Tags: BangaloreKannada NewsKannada News LiveKannada News OnlineKannada News WebsiteKannada WebsiteKFDLatest News KannadaNews in KannadaNews KannadaR Ashokಆರ್. ಅಶೋಕ್ಬೆಂಗಳೂರುಮಂಗನಕಾಯಿಲೆ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರ ಕಿರುತೆರೆಯಲ್ಲಿ `ಸೂರ್ಯವಂಶ’ದ ಘರ್ಜನೆ | ಅನಿರುದ್ ಮಾಸ್ ಎಂಟ್ರಿಯ ಪ್ರೋಮೋ ವೈರಲ್

Next Post

ಪೂನಂಪಾಂಡೆ ಪ್ರಕರಣ ಊಹಾ ಪತ್ರಿಕೋದ್ಯಮಕ್ಕೆ ಉದಾಹರಣೆ: ಕೆ.ವಿ.ಪಿ

kalpa News

kalpa News

Next Post
ಪತ್ರಿಕೋದ್ಯಮ, ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ. ಪ್ರಭಾಕರ್

ಪೂನಂಪಾಂಡೆ ಪ್ರಕರಣ ಊಹಾ ಪತ್ರಿಕೋದ್ಯಮಕ್ಕೆ ಉದಾಹರಣೆ: ಕೆ.ವಿ.ಪಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL