ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಆನಂತಪುರ ಜಿಲ್ಲೆ ಬೊಮ್ಮನಹಳ್ಳ ನಿವಾಸಿ ಕಾರ್ತಿಕ್ (23) ಮತ್ತು ಪ್ರಕಾಶಂ ಜಿಲ್ಲೆಯ ಭಗಿರಥ ರೆಡ್ಡಿ (17) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಕಾರ್ತಿಕ್ ವ್ಯಾಸಂಗ ಸಲುವಾಗಿ ಬೆಂಗಳೂರಿಗೆ ಬಂದು ಚಂದ್ರಾಪುರದಲ್ಲಿ ಬಾಡಿಗೆ ರೂಮ್‌ನಲ್ಲಿ ನೆಲೆಸಿದ್ದ. ಭಗಿರಥ ರೆಡ್ಡಿ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಹೊಸೂರು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post