ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Central Minister Nirmala Seetharaman ಅವರ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಬೆಂಗಳೂರಿನಲ್ಲಿ ನೆರವೇರಿತು.
ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರಾಗಿದ್ದು, ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು.
ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ವಧು-ವರನಿಗೆ ಮಂತ್ರಘೋಷದ ಮೂಲಕ ನೀಡಿ ಹರಸಿದರು.
ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲ ಸೀತಾರಾಮನ್ ಅವರಿಗೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post