ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಹು ಅನುಭವಸ್ಥ, ಹಿರಿಯ ನಾಯಕ, ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದ ಸಚಿವ ಉಮೇಶ್ ಕತ್ತಿ ಅಕಾಲಿಕ ನಿಧನ ಬಹಳ ನೋವು ತಂದಿದೆ ಎಂದು ಪ್ರಧಾನಿ ಮೋದಿ PM Modi ಟ್ವೀಟ್ ಮಾಡಿದ್ದಾರೆ.
ಶ್ರೀ ಉಮೇಶ್ ಕತ್ತಿ ಜಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) September 7, 2022
ಸರಳ, ಸಜ್ಜನಿಕೆ ಹಿರಿಯ ರಾಜಕಾರಿ ಉಮೇಶ್ ಕತ್ತಿ ಅವರ ನಿಧನದಿಂದ ತುಂಬಾ ಆಘಾತ ಮತ್ತು ದುಃಖವಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವರಾಗಿ ಅವರು ಉತ್ತಮ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಅರಣ್ಯ ಮತ್ತು ಆಹಾರ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಹೇಳಿದರು.
ಶಿಕಾರಿಪುರದಲ್ಲಿಂದು ಮಾತನಾಡಿದ ಅವರು, ಅತ್ಯಂತ ಕಿರಿಯ ವಯಸ್ಸಿನಲ್ಲಿ ರಾಜಕೀಯ ಪ್ರವೇಶಿಸಿ, ೩೨ ವರ್ಷ ರಾಜಕೀಯ ಸೇವೆ ಸಲ್ಲಿಸಿದ್ದಾರೆ. ಸತತವಾಗಿ ೯ಬಾರಿ ಶಾಸಕರಾಗಿ, ನಾಲ್ಕು ಬಾರಿ ಸಚಿವರಾಗಿ ಅಪಾರ ಜನಪ್ರಿಯತೆ ಗಳಿಸಿರುವ ಅವರ ಕೊಡುಗೆ ಅನನ್ಯ. ಇಂತಹ ನಿಷ್ಠಾವಂತ ರಾಜಕಾರಣಿಯನ್ನು ಕಳೆದುಕೊಂಡಿದ್ದು, ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದರು.
Also read: ಪತ್ನಿಯ ಕುತ್ತಿಗೆ ಕೊಯ್ದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ: ಮಹಿಳೆ ಸಾವು
ಮಾಜಿ ಸಚಿವ ಈಶ್ವರಪ್ಪ ಸಂತಾಪ
ಉಮೇಶ್ ಕತ್ತಿ ನಿಧನದ ಸುದ್ದಿ ಕೇಳಿ ಅಘಾತವಾಗಿದೆ. ಸಚಿವರಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರದ್ದು ಸರಳ ವ್ಯಕ್ತಿತ್ವ. ಅಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ಎಲ್ಲರಿಗೂ ಬಹಳ ನೋವಾಗಿದೆ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಮಾಜಿ ಸಚಿವ ಈಶ್ವರಪ್ಪ K S Eshwarappa ಸಂತಾಪ ಸೂಚಿಸಿದ್ದಾರೆ.
ಸಂಸದ ರಾಘವೇಂದ್ರ ಸಂತಾಪ:
ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಸಂಸದ ಬಿ ವೈ ರಾಘವೇಂದ್ರ MP Raghavendra ಹೇಳಿದ್ದಾರೆ.
ವಿಜಯೇಂದ್ರ ಸಂತಾಪ:
ಉಮೇಶ್ ಕತ್ತಿ ನಿಧನ ಎಲ್ಲರಿಗೂ ಆಘಾತ ತಂದಿದೆ. ಅವರ ಅಕಾಲಿಕ ನಿಧನದಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಉಮೇಶ್ ಕತ್ತಿ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ B Y Vijayendra ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post