ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಲನಚಿತ್ರ ನಟ, ನಿರ್ದೇಶಕ ಉಪೇಂದ್ರ #Upendra ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾದ ಹಿನ್ನೆಲೆಯಲ್ಲಿ ಉಪೇಂದ್ರ ಅವರು ತಾನು ಕ್ಷೇಮವಾಗಿದ್ದೇನೆ ನಿಮ್ಮ ಪ್ರೀತಿ ಕಾಳಜಿಗೆ ಅನಂತ ಧನ್ಯವಾದಗಳು ಎಂದು ತಿಳಿಸಿದ್ಧಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ… ರೆಗ್ಯುಲರ್ ಚೆಕ್ ಅಪ್ ಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ ಅಷ್ಟೇ.. ಯಾವುದೇ ಊಹಾ ಪೋಹ ಗಳಿಗೆ ಕಿವಿಕೊಟ್ಟು ಗೊಂದಲಕ್ಕಿಡಾಗಬೇಡಿ.. ನಿಮ್ಮ ಪ್ರೀತಿ ಕಾಳಜಿಗೆ ಅನಂತ ಧನ್ಯವಾದಗಳು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post