ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಉತ್ತರ ಕನ್ನಡ |
ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರವಾರದ ಮೆಡಿಕಲ್ ಕಾಲೇಜು ಉನ್ನತ ದರ್ಜೆಗೆ ಏರಿಸಿ ಅಲ್ಲೇ ಸೂಪರ್ ಸ್ಪೆಷಾಲಿಟಿಗೆ ಬೇಕಾದ ಅಗತ್ಯ ಸೌಲಭ್ಯ ಇವೆರಡಕ್ಕೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಮ್ಮತಿಸಿದ್ದು, ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ.
ಈ ಕುರಿತಂತೆ ಸಚಿವ ಡಾ. ಸುಧಾಕರ್ Minister Sudhakar ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಕಾರವಾರದಲ್ಲಿ ಮೆಡಿಕಲ್ ಕಾಲೇಜು ಈಗಾಗಲೇ ಇದೆ. ಇಲ್ಲಿ 160 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯ ಇರುವ ಕಟ್ಟಡ ನಿರ್ಮಾಣ ಆಗುತ್ತಿದೆ. ಇದರಲ್ಲಿ ಎರಡು ಅಂತಸ್ತು ಹೆಚ್ಚಳ ಮಾಡಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಎಂಆರ್’ಐ ಯಂತ್ರ ಸೇರಿದಂತೆ ಎಲ್ಲ ಸೌಲಭ್ಯ, ಕ್ಯಾನ್ಸರ್ ವಿಭಾಗ, ನ್ಯೂರೋ ವಿಭಾಗ ಮತ್ತಿತರ ತುರ್ತು ಚಿಕಿತ್ಸೆಗೆ ವ್ಯವಸ್ಥೆ, ಅಗತ್ಯ ತಜ್ಞ ವೈದ್ಯರು, ಅಗತ್ಯ ಉಪಕರಣ ಒದಗಿಸುವುದಾಗಿ ಭರವಸೆ ನೀಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಕಾರವಾರ ರೂಪಾಲಿ ನಾಯ್ಕ್, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ಥಳ ಪರಿಶೀಲನೆ ನಡೆಸಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಭರವಸೆ ದೊರೆತಿದೆ. ಅಧಿಕಾರಿಗಳ ತಂಡದೊಂದಿಗೆ ಆರೋಗ್ಯ ಸಚಿವರು ಜಿಲ್ಲೆಗೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡಲಿದ್ದಾರೆ ಎಂದರು.
Also read: ಗಮನಿಸಿ! ಸೆ.21ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜು ಇರುವುದಿಲ್ಲ
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಜನತೆಯ ಬಹುದಿನಗಳ ಕನಸು ಈಡೇರಿದಂತಾಗಿದೆ. ನಾನು ನಡೆಸಿದ ನಿರಂತರ ಪ್ರಯತ್ನಕ್ಕೂ ಫಲ ಸಿಕ್ಕಂತಾಗಿದೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ, ಜಿಲ್ಲೆ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಚಿವರುಗಳು, ಎಲ್ಲ ಜನಪ್ರತಿನಿಧಿಗಳಿಗೂ ಹಾಗೂ ನನ್ನೊಂದಿಗಿದ್ದ ಜಿಲ್ಲೆಯ ಎಲ್ಲ ಜನತೆಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post