ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ #Valmiki Corporation Scam ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ #Former Minister B Nagendra ಅವರನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸುಮಾರು 40 ಗಂಟೆ ತಪಾಸಣೆ ಬಳಿಕ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಈ ಕ್ರಮ ಕೈಗೊಂಡಿದೆ.
ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Also read: ಶಿವಮೊಗ್ಗ | ತುಂಗಾ ನದಿಯ ಭೀಮನ ಮಡುವಿನಲ್ಲಿ ಮಹಿಳೆಯ ಮೃತದೇಹ ಪತ್ತೆ
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.
ದಾಳಿ ವೇಳೆ ಸರಿಯಾದ ಉತ್ತರ ನೀಡದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದಿದ್ದು, ವಿಚಾರಣೆಗೆ ಬಳಿಕ ನಾಗೇಂದ್ರ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಾಳಿ ವೇಳೆ ಪ್ರತಿಕ್ರಿಯೆ ನೀಡಿರುವ ನಾಗೇಂದ್ರ, ಈ ಪ್ರಕರಣದಲ್ಲಿ ತಮಗೆ ಏನೂ ತಿಳಿದಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post