ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದರೆ, ವೀರಶೈವ ನಾಯಕರೇ ಮುಖ್ಯಮಂತ್ರಿಯಾಗಬೇಕು. ಇಲ್ಲವಾದಲ್ಲಿ ಬಿಜೆಪಿ ನಾಯಕರು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕೊಳದ ಮಠದ ಡಾ.ಶಾಂತವೀರಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾವು ಯಾವುದೇ ವ್ಯಕ್ತಿ ಪರವಿಲ್ಲ. ವೀರಶೈವ ಸಮುದಾಯದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿರುವ ಹಿನ್ನೆಲೆ. ನಮ್ಮ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು. ಅರವಿಂದ ಬೆಲ್ಲದ್ ಆದರೂ ಸರಿ ಬೇರೆ ಯಾರಾದರೂ ಸರಿ ಒಟ್ಟಾರೆ ವೀರಶೈವರಿಗೆ ಅವಕಾಶ ಸಿಗಬೇಕೆಂಬುದು ನಮ್ಮ ಆಗ್ರಹ ಎಂದರು.
ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬಿಜೆಪಿ ವರಿಷ್ಟರು ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಬದಲಾವಣೆ ಮಾಡಬಾರದು. ಉಳಿದ ಎರಡು ವರ್ಷ ಅಧಿಕಾರ ಪೂರ್ಣ ಗೊಳಿಸಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ಹಾನಿಯಾಗಲಿದೆ. ಇದನ್ನು ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಲು ಪರಿಗಣಿಸಬೇಕೆಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post