ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿರಿಯ ನಟ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಹಾಗೂ ಅಭಿಷೇಕ್ ಅವರು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) November 24, 2021
ಕಂಠೀರವ ಸ್ಟುಡಿಯೊಗೆ ಬೆಳಗ್ಗೆ ಕುಟುಂಬಸ್ಥರೊಂದಿಗೆ ಸುಮಲತಾ ಅಂಬರೀಶ್ ಮತ್ತು ಅಭಿಷೇಕ್ ಆಗಮಿಸಿ ಪೂಜಾ ಕಾರ್ಯ ಆರಂಭಿಸಿದರು. ನಟ ದರ್ಶನ್, ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೂಡ ಭಾಗಿ ಆಗಿದ್ದರು.
ಇಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ. ಅಂಬಿ ಇಲ್ಲದೆ ಮೂರು ವರ್ಷ ಕಳೆದಿದ್ದರೂ, ಅವರನ್ನು ಕಳೆದುಕೊಂಡ ನೋವು ಇನ್ನೂ ಕಡಿಮೆ ಆಗಿಲ್ಲ. ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ಆಪ್ತರು ಅಂಬರೀಶ್ ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಸಮಾಧಿಗೆ ಇಂದು ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post