ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೀವ್ರ ಹೃದಯಾಘಾತದಿಂದ ನಿನ್ನೆ ನಿಧನರಾದ ಹಿರಿಯ ನಟ ದ್ವಾರಕೀಶ್ #Dwarkeesh ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಸದಾ ನೆನಪಿನಲ್ಲಿ ಉಳಿಯುವ ನಟನೆ ಹಾಗೂ ಸಿನಿಮಾಗಳನ್ನು ನೀಡಿದ್ದಾರೆ ಎಂದು ಕಂಬನಿ ಮಿಡಿದಿದ್ದಾರೆ.
ಪ್ರೇಕ್ಷಕರನ್ನು ಸೆಳೆದಿಟ್ಟುಕೊಳ್ಳುವ ಹಾಗೂ ಹೊಸಬರನ್ನು ಬೆಂಬಲಿಸುವ ಮೂಲಕ ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ದೊಡ್ಡದು. ಅವರ ನಿಧನದಿಂದ ದುಃಖವಾಗಿದೆ. ಅವರ ಅದ್ಭುತ ಪ್ರಯಾಣವನ್ನು ನಾವು ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
Also read: ಹಿರಿಯ ನಟ ದ್ವಾರಕೀಶ್ ನಿಧನ | ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ
ಗಣ್ಯರ ಸಂತಾಪ
ದ್ವಾರಕೀಶ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ನಟರಾ ಸುದೀಪ್, ದರ್ಶನ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಚೆನ್ನೈನಲ್ಲಿ ಸಿನಿಮಾ ಚಿತ್ರೀಕರಣದಲ್ಲಿದ್ದ ರಜನಿಕಾಂತ್ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post