ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್‌ವುಡ್ Sandalwood ಹಿರಿಯ ನಟಿ ಹೇಮಾ ಚೌಧರಿ Hema Choudhari ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಹೇಮಾ ಚೌಧರಿ ಅವರಿಗೆ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.
ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ವಿದೇಶದಲ್ಲಿದ್ದು ಅವರು ಅಲ್ಲಿಂದ ಹೊರಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post