ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ವುಡ್ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಭಾನುವಾರ (ಜನವರಿ 22ರಂದು) ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿ ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅಂಬರೀಷ್, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು. ಆರಂಭದಲ್ಲಿ ಖಳನಟನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮಣ್ ನಂತರ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು. ಇನ್ನೂ ನಟ ಲಕ್ಷ್ಮಣ್ ನಿಧನಕ್ಕೆ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ.
Also read: ಫೆ.4, 5ರಂದು ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಶಿವಾನಂದ ತಗಡೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post