ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್’ವುಡ್ ಹಿರಿಯ ಪೋಷಕ ನಟ ಮನದೀಪ್ ರಾಯ್ Mandeep Roy ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟರಾಗಿ ನಟಿಸಿರುವ ಅವರು, ಘಟಾನುಘಟಿಗಳೊಂದಿಗೆ ನಟಿಸಿದ್ದಾರೆ.
ಮನದೀಪ್ ರಾಯ್ ಅವರಿಗೆ ಹೃದಯಾಘಾತವಾದ ವಿಚಾರ ತಿಳಿಯುತ್ತಿದ್ದಂತೆ, ಅವರು ಶೀಘ್ರ ಗುಣಮುಖರಾಗುವಂತೆ ಚಿತ್ರೋದ್ಯಮದ ಗಣ್ಯರು ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post