ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಸಾಹಿತಿ, ಲೇಖಕಿ ಡಾ. ಕಮಲಾ ಹಂಪನಾ #Kamala Hampana (89) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಅವರು ಹಿರಿಯ ಸಾಹಿತಿ, ಸಂಶೋದಕರಾಗುವ ಪತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನುಅಗಲಿದ್ದಾರೆ.

ರಾಜಾಜಿನಗರದ ಅವರ ನಿಮಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

ಕಮಲಾ ಹಂಪನಾ ಅವರ ಸುಮಾರು 60ಕ್ಕೂ ಹೆಚ್ಚು ಕೃತಿಗಳು ಇದುವರೆಗೆ ಪ್ರಕಟವಾಗಿದ್ದು, ಇದರಲ್ಲಿ ಸೃಜನಕೃತಿಗಳೂ ಇವೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಕಮಲಾ ಹಂಪನಾ ಅವರ ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, Jainism and Other Essays ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ಬರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post