ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವರದಿ: ಡಿ.ಎಲ್. ಹರೀಶ್
ಸೌಜನ್ಯ ಪ್ರಕರಣಕ್ಕೆ #Soujanya Case ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು #ShriKshetraDharmastala ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” #Sameer MD Dootha ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟ, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ ” ಸಮೀರ್ ಎಂ.ಡಿ. ದೂತ ” ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ #Youtubue Channel ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಹತ್ತು ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಹೂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post