Read - 2 minutes
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಬಿಎಂಪಿ BBMP ವ್ಯಾಪ್ತಿಯಲ್ಲಿ ಕಾಲರಾ, ಡೆಂಗ್ಯೂ ಹಾಗೂ ಕೋವಿಡ್-19ಗೆ Covid-19 ಸಂಬಂಧಿಸಿದಂತೆ ವರ್ಚುವಲ್ ಪರಿಶೀಲನಾ ಸಭೆ ನಡೆಸಿ, ಪ್ರಮುಖ ಸೂಚನೆಗಳನ್ನು ನೀಡಲಾಯಿತು.
ಸಭೆಯ ಪ್ರಮುಖಾಂಶಗಳು ಹೀಗಿವೆ:
- ವಲಯ ವ್ಯಾಪ್ತಿಯಲ್ಲಿ ಎಲ್ಲಾ ಬೋರ್‌ವೆಲ್‌ಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ (ಆರ್.ಒ ಪ್ಲಾಂಟ್)ಗಳ ನೀರಿನ ಮಾದರಿ ಸಂಗ್ರಹಿಸಿ ಜಲಮಂಡಳಿಯ ಲ್ಯಾಬ್‌ಗಳಿಗೆ ಕಳುಹಿಸಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಿಲ್ಲದಿದ್ದಲ್ಲಿ ಅಂತಹವುಗಳನ್ನು ಸ್ಥಗಿತಗೊಳಿಸಬೇಕು.
- ನಗರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ನಿಧಾನಗತಿಯಲ್ಲಿ ಹೆಚ್ಚುತ್ತಿದ್ದು, ಕೋವಿಡ್ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು.
Also read: ಭದ್ರಾವತಿ ಲಕ್ಷ್ಮೀ ನರಸಿಂಹ ದೇವಾಲಯ ಸೇರಿ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ
- ಹೋಟೆಲ್ ಗಳು, ಬೀದಿ ಬದಿ ಮಾರಾಟ ಮಾಡುವ ತಿನಿಸುಗಳು, ಕಟ್ ಫ್ರೂಟ್ಸ್ ಮಾರಾಟ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು.
- ಕಾಲರಾ, ಡೆಂಗ್ಯೂ ಹರಡುವ ಬಗ್ಗೆ ಬಿತ್ತಿಪತ್ರಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು.
- ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ಪತ್ತೆಹಚ್ಚಿ ನಾಶ ಮಾಡುವ ಕೆಲಸ ಮಾಡಬೇಕು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post