No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೃಹತ್ ವಾಕಥಾನ್ ಮೂಲಕ ಮತದಾನ ಜಾಗೃತಿ: 5 ಲಕ್ಷ ಎನ್’ಎಸ್’ಎಸ್ ವಿದ್ಯಾರ್ಥಿಗಳು ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2023
in ಬೆಂಗಳೂರು ನಗರ
0
ಬೃಹತ್ ವಾಕಥಾನ್ ಮೂಲಕ ಮತದಾನ ಜಾಗೃತಿ: 5 ಲಕ್ಷ ಎನ್’ಎಸ್’ಎಸ್ ವಿದ್ಯಾರ್ಥಿಗಳು ಭಾಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕೆಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ Shalini Rajanish ರವರು ತಿಳಿಸಿದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ Assembly Election ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಛೇರಿ -ಕರ್ನಾಟಕ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಆಯೋಜಿಸಿದ್ದ “ಬೃಹತ್ ವಾಕಥಾನ್” ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿ ಬರುವಂತಹ ಪ್ರತಿನಿಧಿಗಳು ವಿಧಾನಸೌಧಕ್ಕೆ ಬಂದು, ವಿಧಾನಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಚರ್ಚಿಸುವಂತಹ ಯೋಜನೆಗಳು, ಪಾಲಿಸಿಗಳು ಕಾರ್ಯರೂಪಕ್ಕೆ ತರುವಂತಹವೆಲ್ಲವೂ ನಮ್ಮೆಲ್ಲರ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ವಿಧಾನ ಸಭೆಗೆ ಆಯ್ಕೆಯಾಗುವ ಪ್ರತಿನಿಧಿಯ ಬಗ್ಗೆ ನಾವೆಲ್ಲರೂ ಮೊದಲು ತಿಳಿದುಕೊಂಡು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಾರ್ಯನಿರತರಾಗಿರುವ ವಿದ್ಯಾರ್ಥಿಗಳೆಲ್ಲರೂ ನಿಮ್ಮ-ನಿಮ್ಮ ಕ್ಷೇತಗಳಲ್ಲಿ ಎಷ್ಟು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಪಾಲ್ಗೊಂಡಿದ್ದಾರೆ. ಅವರ ಬಗ್ಗೆ ಮತದಾರರಿಗೆ ತಿಳಿದಿದೆಯೇ, ಯಾರು ಉತ್ತಮ ಅಭ್ಯರ್ಥಿ, ಮತಗಟ್ಟೆಗಳು ಎಲ್ಲಿವೆ, ಅಲ್ಲಿಗೆ ಹೇಗೆ ಹೋಗಬೇಕು ಹಾಗೂ ಏನೆಲ್ಲಾ ವ್ಯವಸ್ಥೆಯಿದೆ ಎಂಬುದರ ಬಗ್ಗೆ ನಿಮ್ಮ ಬಡಾವಣೆಯಲ್ಲಿರುವ ಮತದಾರರಿಗೆ ತಿಳಿಸುವಂತಹ ಕೆಲಸ ಮಾಡಬೇಕೆಂದು ಶಾಲಿನಿ ರಜನೀಶ್ ಹೇಳಿದರು.
ನಮ್ಮ ರಾಜ್ಯ ವಿಧಾನಸಭೆಗೆ ಒಳ್ಳೆಯ ಪ್ರತಿನಿಧಿಗಳು ಆಯ್ಕೆಯಾಗಿ ಬರಬೇಕು. ಆ ಪ್ರತಿನಿಧಿ ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸುವಂತಾಗಬೇಕು. ಅವರು ಮಾಡುವಂತಹ ಪ್ರಗತಿಗೆ ನಾವೆಲ್ಲರೂ ಸಹಕಾರ ನೀಡಬೇಕು. ಸಂವಿಧಾನದಲ್ಲಿರುವ ಮೂಲಭೂತ ವಿಷಯಗಳನ್ನು ತಿಳಿದು, ಅದರ ಬಗ್ಗೆ ನಾಗರಿಕರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.

Also read: ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ್ದು ಎಲ್ಲಿ, ಯಾರು ಗೊತ್ತಾ?

5 ಲಕ್ಷ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ
ರಾಜ್ಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್)ಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಎಲ್ಲರೂ ಚುನಾವಣಾ ಆಯೋಗದ ಜೊತೆಗೆ ಸೇರಿ ಎಲ್ಲಾ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಭಾಗವಾಗಿ ಮತದಾನದ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇಂದು ಯುವ ಸಮೂಹದೊಡನೆ ವಾಕಥಾನ್ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಮತದಾನದ ಹಕ್ಕನ್ನು ಚಲಾಯಿಸಿ ಚುನಾವಣೆ ಯಶಸ್ವಿ ಗೊಳಿಸಬೇಕು ಎಂದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವದ ಮಹಾಹಬ್ಬದ ದಿನದಂದು ಎಲ್ಲರೂ ಬಂದು ಮತಚಾಯಿಸುವ ಮೂಲಕ ಮತದಾನದ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ವಾಕಥಾನ್ ನಲ್ಲಿ 5000 ವಿದ್ಯಾರ್ಥಿಗಳು ಭಾಗಿ
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆಯ ಮೂಲಕ, ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಸಾಗಿ ಕಂಠೀರವ ಕ್ರೀಡಾಂಗಣದವರೆಗೆ ನಡೆದ ಬೃಹತ್ ವಾಕಥಾನ್ ನಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ 5,000ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬಿತ್ತಿ ಪತ್ರಗಳನ್ನು ಹಿಡಿದು ರಸ್ತೆಯುದ್ದಕ್ಕೂ ಘೋಷಣೆಗಳನ್ನು ಕೂಗುತ್ತಾ ಮತದಾರರಲ್ಲಿ ಮತದಾನ ಮಾಡಲು ಪ್ರೇರೇಪಿಸಿದರು.
ಮತದಾನ ಸಂಕಲ್ಪ ನಾಟಕ ಪ್ರದರ್ಶನ:
ಬಿಎಂಟಿಸಿ ಹಾಗೂ ಕೆಎಸ್’ಆರ್’ಟಿಸಿ ಸಿಬ್ಬಂದಿಯ ನಾಟಕ ತಂಡದಿಂದ ಪ್ರಜಾಪ್ರಭುತ್ವದಲ್ಲಿ ಮತದಾನದ ಪ್ರಾಮುಖ್ಯತೆಯನ್ನು ತಿಳಿಸುವಂತಹ “ಮತದಾನ ಸಂಕಲ್ಪ” ನಾಟಕವನ್ನು ಟಿ.ಎಂ ಬಾಲಕೃಷ್ಣ ರವರು ರಚಿಸಿದ್ದು, ನಾಟಕದ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು.

ಈ ವೇಳೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ಶ್ರೀ ವಸ್ತ್ರದ್, ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ, ಬೆಂಗಳೂರು ಐಕಾನ್ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly ElectionBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShalini Rajanishಬೆಂಗಳೂರುವಿಧಾನಸಭಾ ಚುನಾವಣೆಶಾಲಿನಿ ರಜನೀಶ್
Share207Tweet123Send
Previous Post

ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ್ದು ಎಲ್ಲಿ, ಯಾರು ಗೊತ್ತಾ?

Next Post

ಏ.30ರಂದು ‘ನಮ್ಮ ನಡೆ ಮತಗಟ್ಟೆಯ ಕಡೆ’ ಏಕಕಾಲಕ್ಕೆ ಧ್ವಜಾರೋಹಣ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ಸುಲಲಿತ, ಪಾರದರ್ಶಕ ಚುನಾವಣೆಗೆ ವಿವಿಧ ತಂಡಗಳ ರಚನೆ: ಇಲ್ಲಿದೆ ಅಧಿಕಾರಿಗಳ ಮಾಹಿತಿ

ಏ.30ರಂದು 'ನಮ್ಮ ನಡೆ ಮತಗಟ್ಟೆಯ ಕಡೆ' ಏಕಕಾಲಕ್ಕೆ ಧ್ವಜಾರೋಹಣ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL