ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವೃಕ್ಷ ಮಾತೆ ಎಂದೇ ದೇಶದಾದ್ಯಂತ ಖ್ಯಾತಿ ಪಡೆದಿದ್ದ ಸಾಲು ಮರದ ತಿಮ್ಮಕ್ಕ (114) #Saalumarada Thimmakka ವಿಧಿವಶರಾಗಿದ್ದಾರೆ.
ವಯೋಸಜಹ ಅಸ್ವಸ್ಥತೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ #Apolo Hospital ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರ ಇಂದು ಕೊನೆಯುಸಿರೆಳೆದಿದ್ದಾರೆ.

ತಿಮ್ಮಕ್ಕ ಅವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಸುಮಾರು 12 ವರ್ಷದ ವಯಸ್ಸಿನಲ್ಲಿ ಮದುವೆಯಾದರು. ಚಿಕ್ಕಯ್ಯ ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು. ಮದುವೆಯಾಗಿ ಅದೆಷ್ಟೋ ವರ್ಷಗಳಾದರೂ ತಿಮ್ಮಕ್ಕ ಅವರಿಗೆ ಮಕ್ಕಳಾಗಿರಲ್ಲಿಲ್ಲ.

ಸಾಲು ಮರದ ತಿಮ್ಮಕ್ಕ ಈ ರೀತಿ ತಮ್ಮ ಸ್ವಂತ ಖರ್ಚಿನಲ್ಲಿ 8000 ಸಸಿಗಳನ್ನು ನೆಟ್ಟಿದ್ದಾರೆ. ಇಂದಿಗೆ ಅವುಗಳ ಮೌಲ್ಯವು ಸುಮಾರು 15ಲಕ್ಷಕ್ಕೂ ಅಧಿಕ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ. ಅನಕ್ಷರಸ್ಥೆಯಾಗಿದ್ದರೂ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ಕಾರ್ಯ ಮಾಡಿದರು.

ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ ಹೊಂದಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವುದರ ಜತೆಗೆ, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraja Bommai ನೀಡಿದ್ದರು.
ದೇಶದ ಯಾವುದೇ ರಾಜ್ಯಕ್ಕೆ ಪ್ರವಾಸ ಮಾಡಿದರೂ ಅದಕ್ಕೆ ತಗಲುವ ವೆಚ್ಚವನ್ನು ಸರಕಾರ ಭರಿಸುತ್ತಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post