ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಕೆಲವು ಪ್ರದೇಶಗಳಲ್ಲಿ ಹೀಟ್ ವೇವ್ ಹಾಗೂ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ #Hot wind ಬೀಸುವ ಹಾಗೂ 18 ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಎಲ್ಲೆಲ್ಲಿ ಬಿಸಿಗಾಳಿ ಎಚ್ಚರಿಕೆ?
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ತುಮಕೂರಿನಲ್ಲಿ ಉಷ್ಣಗಾಳಿ ಬೀಸಲಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್’ನಷ್ಟು ಹೆಚ್ಚಾಗಲಿದೆ.
Also read: ಮೈಸೂರು | ಮಕ್ಕಳಿಗೆ ಆಧ್ಯಾತ್ಮಿಕ ಶಿಕ್ಷಣವೂ ಮುಖ್ಯ | ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅಭಿಮತ
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.
ಸುಡುವ ಸೂರ್ಯನಿಗೆ ದೀರ್ಘಕಾಲ ತೆರೆದುಕೊಳ್ಳುವವರಲ್ಲಿ ಶಾಖ-ಸಂಬAಧಿತ ಅನಾರೋಗ್ಯದ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಕಾಳಜಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.
ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?
ಇನ್ನು, ಮುಂದಿನ 4 ದಿನಗಳ ಕಾಲ ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























