ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇನ್ನು ಮುಂದೆ ರಾಜ್ಯದಲ್ಲಿ ಶಾಂತಿ ಕದಡಿದರೆ ಆರ್’ಎಸ್’ಎಸ್ ಹಾಗೂ ಬಜರಂಗದಳವನ್ನೂ ಸಹ ನಿಷೇಧಿಸುತ್ತೇವೆ ಎಂದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುವ ಭರವಸೆ ನೀಡಿದ್ದೇವೆ. ಇದಕ್ಕೆ ವಿರುದ್ಧವಾಗಿ ಶಾಂತಿ ಕದಡಿದರೆ ಆರ್’ಎಸ್’ಎಸ್ ಹಾಗೂ ಬಜರಂಗದಳ ಎನ್ನುವುದನ್ನು ನೋಡದೇ ನಿಷೇಧಿಸುತ್ತೇವೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ಇದ್ದರೆ ಪಾಕಿಸ್ಥಾನಕ್ಕೆ ಹೋಗಬಹುದು ಎಂದಿದ್ದಾರೆ.
ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದ ಅವರು, ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದಿದ್ದಾರೆ.
Also read: ನೂತನ ಸಂಸತ್ ಭವನ ಉದ್ಘಾಟನೆಯನ್ನು ಎಷ್ಟು ಪಕ್ಷಗಳು ಬಹಿಷ್ಕರಿಸಿವೆ ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post