ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್ ಬದ್ದತೆ’ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕ ಇಂದು ಮಂಗಳವಾರ ಬಿಡುಗಡೆಯಾಯಿತು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, Siddaramaiah ಡಿ ಕೆ ಶಿವಕುಮಾರ್, DKShivakumar ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂಬ ಘೋಷವಾಕ್ಯ ಹೊಂದಿರುವ ಪ್ರಣಾಳಿಕೆ ವಿವರ ಹೀಗಿದೆ.
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ,
- ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ, ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,
- ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ, ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ,
- ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ, ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ, ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
- ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ,
- ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ, ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ, ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)
- ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ,
- ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ, ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ, ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,
- ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ, ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ, ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ,
- ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ), ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post