ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಮ್ಮ ರಾಜ್ಯದ ಪೊಲೀಸರಿಗೆ ತಮ್ಮದೇ ಆದ ಹೆಸರಿದ್ದು, ಇಲಾಖೆಗೆ ಮತ್ತಷ್ಟು ಶಕ್ತಿ ತುಂಬುವ ರೀತಿಯಲ್ಲಿ ಕೆಲಸ ಮಾಡಲು ಇಚ್ಚಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ವಿಕಾಸಸೌಧದಲ್ಲಿ ತಮ್ಮ ನೂತನ ಅಧಿಕೃತ ಕಚೇರಿಯಲ್ಲಿ ಪೂಜೆ ಸಲ್ಲಿಸಿ, ಕೆಲಸ ಆರಂಭಿಸಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿಯುತ ವಾತಾವರಣ ಇರಲಿ ಅಂತ ದೇವರಲ್ಲಿ ಕೇಳಿ ಕೊಳ್ಳುತ್ತಿದ್ದೇನೆ. ಶಾಂತಿ ಸುವ್ಯವಸ್ಥೆ ಕಾಪಾಡಿ, ರಾಜ್ಯದ ಜನರ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು. ನನ್ನ ಮೇಲೆ ನಂಬಿಕೆಯಿಟ್ಟು ಈ ಜವಾಬ್ದಾರಿ ನೀಡಿರುವ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post