ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೃಷ್ಣ ಮೇಲ್ದಂಡೆ ಯೋಜನೆ #Krishna Upper River Project 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್’ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ.
ಬಜೆಟ್ #Budget ಭಾಷಣದಲ್ಲಿ ಮಾತನಾಡಿರುವ ಅವರು, ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದಿದ್ದಾರೆ.

2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Also read: ರಾಜ್ಯದ ಮಲ್ಟಿಪ್ಲೆಕ್ಸ್’ಗಳಿಗೆ ಅಂಕುಶ | ಇನ್ಮುಂದೆ ಬೇಕಾಬಿಟ್ಟಿ ಟಿಕೇಟ್ ದರ ಏರಿಸುವಂತಿಲ್ಲ | ಇಷ್ಟಕ್ಕೆ ನಿಗದಿ
ಮೇಕೆದಾಟು #Mekedatu ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ ಮಾಡಲಾಗುವುದು ಎಂದಿದ್ದಾರೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿಗೊಳಿಸಲಾಗುವುದು. ಅಲ್ಲದೇ. ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಾಗೆಯೇ, ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post