ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಐಎಸ್’ಎಲ್ VISL ಕಾರ್ಖಾನೆಯನ್ನು ಉಳಿಸುವ ಆಶಯ ನಮಗೂ ಸಹ ಇದ್ದು, ಇದಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಎಲ್ಲರೂ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳಲೇಬೇಕಿದೆ. ಇದಕ್ಕಾಗಿ ಎಲ್ಲ ಪ್ರಯತ್ನಗಳನ್ನೂ ಸಹ ನಾವು ಮಾಡಿದ್ದೇವೆ. ಸದ್ಯ ಕೇಂದ್ರ ಸರ್ಕಾರ ಕೈಗೊಂಡಿರುವ ಸ್ಥಗಿತದ ನಿರ್ಧಾರ ಬದಲಿಸಿ, ಕಾರ್ಖಾನೆಯನ್ನು ಮುಚ್ಚದೇ ಮುಂದುವೆರೆಸಿಕೊಂಡು ಹೋಗಲು ಮನವೊಲಿಸಬೇಕಿದೆ. ಇದಕ್ಕಾಗಿ ಎಲ್ಲರ ಸಹಕಾರ ಪಡೆದು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರದ ಮೇಲೆ ಒತ್ತಡ ಹಾಕಬೇಕಿದೆ ಎಂದರು.
Also read: ವಿಐಎಸ್’ಎಲ್ ಉಳಿಸಲು ವಿಧಾನಸಭೆಯಲ್ಲಿ ಒತ್ತಡ ಹೇರಿದ ಶಾಸಕ ಸಂಗಮೇಶ್ವರ್ ಹೇಳಿದ ದಾರಿಯೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post