ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದಿAದ ನೊಂದಿರುವ ನನ್ನ ಪತ್ನಿ 14 ನಿವೇಶನಗಳನ್ನು ಮೂಡಾಗೆ ಹಿಂದಿರುಗಿಸುವ ನಿರ್ಧಾರ ಕೈಗೊಂಡಿರುವುದು ನನಗೆ ಅಶ್ಚರ್ಯ ಮೂಡಿಸಿದೆ ಎಂದು ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ.
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.
ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.
— Siddaramaiah (@siddaramaiah) September 30, 2024
ತಮ್ಮ ಪತ್ನಿ ಪಡೆದ 14 ಸೈಟುಗಳನ್ನು ಮೂಡಾಗೆ #MUDA ಹಿಂದಿರುಗಿಸುವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಿದ್ದರಾಮಯ್ಯ, ತಮ್ಮ ಪತ್ನಿಯ #Siddaramaiah Wife ಈ ನಿರ್ಧಾರ ಆಶ್ಚರ್ಯ ಮೂಡಿಸಿದೆ ಎಂದಿದ್ದಾರೆ.
ದ್ವೇಷ ರಾಜಕಾರಣ, ಸತ್ಯಮೇವ ಜಯತೆ ಎಂದು ಹ್ಯಾಶ್ ಟ್ಯಾಗ್ ಬಳಸಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Also read: ಸೂಪರ್ ಸ್ಟಾರ್ ರಜನಿಕಾಂತ್ ದಿಢೀರ್ ಆಸ್ಪತ್ರೆಗೆ ದಾಖಲು | ಏನಾಯಿತು? ಅಭಿಮಾನಿಗಳಲ್ಲಿ ಆತಂಕ
ಹೀಗಿದೆ ಸಿಎಂ ಸಿದ್ದರಾಮಯ್ಯ ಪೋಸ್ಟ್:
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.
ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.
ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.
ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.
ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆ ಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.
ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post