ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಅನ್ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ. ಪಾಸಿಟಿವಿಟಿ ರೇಟ್ ಶೇ.5ಕ್ಕಿಂತಲೂ ಕಡಿಮೆ ಬಂದರೆ ಸಡಿಲ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಲಾಕ್ ಡೌನ್ ಜಾರಿಯದ ನಂತರ ಸೋಂಕು ಕಡಿಮೆಯಾಗುತ್ತಿದೆ. ಆದರೆ, ಸೋಂಕು ಹರಡುವಿಕೆಯ ಚೈನ್ ಲಿಂಕ್ ಕಡಿತಗೊಳ್ಳುತ್ತಿಲ್ಲ. ಹೀಗಾಗಿ, ಜನರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಪಾಸಿಟಿವಿಟಿ ರೇಟ್ ಶೇ.5ಕ್ಕಿಂತಲೂ ಕಡಿಮೆ ಬಂದರೆ ಅನ್ ಲಾಕ್ ಮಾಡಲಾಗುವುದು ಎಂದಿದ್ದಾರೆ.
ಇನ್ನು, ಈಗ ಜಾರಿಯಲ್ಲಿರುವ ಮಾರ್ಗಸೂಚಿಯೇ ಮುಂದುವರೆಯಲಿದ್ದು, ಸದ್ಯಕ್ಕೆ ಇದರಲ್ಲಿ ಯಾವುದೇ ರೀತಿಯ ಬದಲಾವಣೆಯಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post