No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿರಿಯರ ಪುಣ್ಯದ ಫಲ ಉಣ್ಣುವಾಗ ಆ ತಲೆಮಾರನ್ನು ನೆನೆಯಬೇಕು: ಹಿರಿಯ ಪತ್ರಕರ್ತ ಭಾಸ್ಕರ್ ರಾವ್

ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ & 80 ವರ್ಷದ ಹವ್ಯಕ ಸಂಸ್ಥಾಪನೋತ್ಸವ

kalpa News by kalpa News
April 3, 2023
in ಬೆಂಗಳೂರು ನಗರ
0
ಹಿರಿಯರ ಪುಣ್ಯದ ಫಲ ಉಣ್ಣುವಾಗ ಆ ತಲೆಮಾರನ್ನು ನೆನೆಯಬೇಕು: ಹಿರಿಯ ಪತ್ರಕರ್ತ ಭಾಸ್ಕರ್ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ತೆಂಗಿನಮರ ಹಾಕಿದವರು ಅದರ ಫಲ ಬರುವ ಕಾಲದಲ್ಲಿ ಇರುವುದಿಲ್ಲ. ಅವರ ಮುಂದಿನ ಪೀಳಿಗೆ ಅದರ ಫಲವನ್ನು ಸ್ವೀಕರಿಸುತ್ತಾರೆ ಎಂಬ ಮಾತಿದೆ. ಆದರೆ ಫಲವನ್ನು ಉಣ್ಣುವವರು ಆ ತೆಂಗಿನ ಮರವನ್ನು ನೆಟ್ಟ ತಮ್ಮ ಹಿಂದಿನ ತಲೆಮಾರನ್ನು ನೆನಪಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತರಾದ ಎಂ.ಕೆ ಭಾಸ್ಕರ್ ರಾವ್ ಹೇಳಿದರು.

ಶ್ರೀ ಅಖಿಲ ಹವ್ಯಕ ಮಹಾಸಭೆಯ 80ನೆಯ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಹಾಗೂ ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭ್ಯಾಗತರಾಗಿ ಮಾತನಾಡಿದ ಅವರು, ಅನೇಕ ಹಿರಿಯರ ಪ್ರಯತ್ನದ ಫಲವಾಗಿ ಹವ್ಯಕ ಮಹಾಸಭೆ ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಯಾಗಿ, ಈಗ ಹೆಮ್ಮರವಾಗಿ ಬೆಳದಿದೆ. ಅದರ ಫಲವನ್ನು ಈ ತಲೆಮಾರಿನವರು ಅನುಭವಿಸುತ್ತಿದ್ದೇವೆ. ಸಂಸ್ಥಾಪಕರನ್ನು ಸ್ಮರಿಸುವ ಹವ್ಯಕ ಮಹಾಸಭೆಯ ಕಾರ್ಯ ಶ್ಲಾಘನೀಯ ಎಂದ ಅವರು, ಹವ್ಯಕ ವಿಶೇಷ ಪ್ರಶಸ್ತಿಗೆ ಭಾಜನರಾದ ಎಲ್ಲರ ಸಾಧನೆ ಸಮಾಜಕ್ಕೆ ಪ್ರೇರಣೆ ಎಂದರು.
ಅಭ್ಯಾಗತರಾದ ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ ಮಾತನಾಡಿ, ನಮ್ಮಲ್ಲಿ ಅನೇಕ ಕೃಷಿಕರು ಅನೇಕ ಸಾಧನೆಗಳನ್ನು ಮಾಡಿದವರು ಹಾಗೂ ಗ್ರಾಮೀಣ ಪ್ರತಿಭೆಗಳು ಇದ್ದು, ರಾಜ್ಯಮಟ್ಟದ ಇಂತಹ ಕಾರ್ಯಕ್ರಮಗಳ ಜೊತೆಗೆ ಪ್ರದೇಶಿಕ ಮಟ್ಟದಲ್ಲೂ ಅಂತಹವರನ್ನು ಸನ್ಮಾನಿಸುವ ಕಾರ್ಯವಾಗಬೇಕು. ಸಮುದಾಯದ ಬೆಳವಣಿಗೆಯ ಕಾರ್ಯದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳೋಣ ಎಂದರು.

Also read: ಶ್ರೀ ಸತ್ಯಧರ್ಮ ವಿದ್ಯಾಪೀಠಕ್ಕೆ `ಕೀರ್ತಿ’ ತಂದ ತರುಣ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಶ್ರುತಕೀರ್ತಿಗೆ ಸ್ವರ್ಣ ಪದಕ

ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಮಾತನಾಡಿ,’ಹವ್ಯಕ ವಿಶೇಷ’ ಪ್ರಶಸ್ತಿಗಳು ಅರ್ಜಿ ಹಾಕಿ ಪಡೆಯುವ ಪ್ರಶಸ್ತಿಗಳಲ್ಲ. ಸಮಾಜದಿಂದ ನಾಮನಿರ್ದೇಶನಗೊಂಡು ಆಯ್ಕೆಮಾಡುವ ಪ್ರಶಸ್ತಿ ಇದಾಗಿದೆ. ಪ್ರಶಸ್ತಿಗಳನ್ನು ನೀಡಿರುವುದು ಅವರ ಸಾಧನೆಗೆ ಸಮಾಜ ನೀಡುತ್ತಿರುವ ಗೌರವ ಮಾತ್ರವಲ್ಲದೇ, ಇದು ಯುವ ಜನಾಂಗಕ್ಕೆ ಪ್ರೇರಣೆಯೂ ಆಗಿದೆ ಎಂದರು.

ಹವ್ಯಕ ಮಹಾಸಭೆ 80ನೆಯ ವರ್ಷದ ಸಂಸ್ಥಾಪನೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ನಮ್ಮ ಪೂರ್ವಜರು ಸ್ವಾತಂತ್ರ್ಯ ಪೂರ್ವದಲ್ಲಿ ಇದನ್ನು ಸ್ಥಾಪಿಸಿರುವುದು ನಮ್ಮ ಸಮಾಜದ ಹೆಮ್ಮೆಯಾಗಿದೆ. ಈಗ ಸಮಾಜ ಸಂಘಟನೆ ಬಲಿಷ್ಠಗೊಂಡಿದ್ದು, ನಾವೆಲ್ಲ ಸಮಾಜಮುಖೀ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಇನ್ನಷ್ಟು ಬಲಶಾಲಿಯಾಗಿಸೋಣ ಎಂದರು.
ಹವ್ಯಕ ಮಹಾಸಭೆಯ ಸಂಘಟನೆಯು ಪ್ರಾದೇಶಿಕ ಕೇಂದ್ರಗಳ ಮೂಲಕ ಬಲಗೊಳುತ್ತಿದ್ದು, ಪುತ್ತೂರಿನಲ್ಲಿ ಈಗಾಗಲೇ ಪ್ರಾದೇಶಿಕ ಕೇಂದ್ರ ಕಾರ್ಯಾಚರಿಸುತ್ತಿದ್ದು, ಸಾಗರ, ಶಿರಸಿ, ಯಲ್ಲಾಪುರ ಹಾಗೂ ಉಡುಪಿಯಲ್ಲಿ ಪ್ರಾದೇಶಿಕ ಕೇಂದ್ರವನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಮಹಾಸಭೆಯ ಕಾರ್ಯಗಳ ಕುರಿತಾಗಿ ಮಾಹಿತಿ ನೀಡಿದರು.

ಇದಕ್ಕೂ ಮೊದಲು, ಹವ್ಯಕ ವಿಭೂಷಣ, ಹವ್ಯಕ ಭೂಷಣ, ಹವ್ಯಕ ಶ್ರೀ ಹಾಗೂ ಹವ್ಯಕ ಸೇವಾಶ್ರೀ ಪ್ರಶಸ್ತಿಯನ್ನು ಆಯ್ಕೆಯಾದ ಸಾಧಕರಿಗೆ ನೀಡಿ ಮಹಾಸಭೆಯ ಗೌರವ ಸಲ್ಲಿಸಲಾಯಿತು. ಪ್ರಶಸ್ತಿ ಭಾಜನರಾದವರು ತಮ್ಮ ಜೀವನಾನುಭವಗಳನ್ನು ಹಂಚಿಕೊಂಡರು. ಹಾಗೆಯೇ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 14 ಮಕ್ಕಳಿಗೆ ಪಲ್ಲವಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಆರ್. ಎಂ ಹೆಗಡೆ, ಶ್ರೀಧರ ಜೆ ಭಟ್ಟ ಕೆಕ್ಕಾರು, ಕಾರ್ಯದರ್ಶಿಗಳಾದ ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕಾರ್ಯಕ್ರಮದ ಸಂಚಾಲಕರಾದ ರವಿನಾರಾಯಣ ಪಟ್ಟಾಜೆ, ಮುಗಲೋಡಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
Kalahamsa Infotech private limitedಕಾರ್ಯಕ್ರಮದ ಕೊನೆಯಲ್ಲಿ ದಿವಾಕರ ಹೆಗಡೆ ಕೆರೆಹೊಂಡ ಅವರ ‘ಪ್ರಕ್ಷುಬ್ಧ ರಾಧೇಯ’ ಏಕವ್ಯಕ್ತಿ ತಾಳಮದ್ದಲೆ ಜನಮನ ರಂಜಿಸಿತು.

ಹವ್ಯಕ ವಿಶೇಷ ಪ್ರಶಸ್ತಿ ಪುರಸ್ಕೃತರು
ಹವ್ಯಕ ವಿಭೂಷಣ –
1. ಪೆರುವೋಡಿ ನಾರಾಯಣ ಭಟ್ (ತೆಂಕುತಿಟ್ಟು ಯಕ್ಷಗಾನ)

ಹವ್ಯಕ ಭೂಷಣ –
1. ಡಾ| ಲಕ್ಷ್ಮೀಶ್ ಸೋಂದಾ (ಇತಿಹಾಸಕಾರರು ಮತ್ತು ಶಿಕ್ಷಣ ತಜ್ಞರು)
2. ಶ್ರೀ ಜಿ. ಎಸ್. ಹೆಗಡೆ ಸಪ್ತಕ (ಸಂಗೀತ ಕ್ಷೇತ್ರ)
ಹವ್ಯಕ ಶ್ರೀ –
1. ಡಾ. ಕಿಶನ್ ಭಾಗವತ್ (ವೈದ್ಯಕೀಯ & ಸಾಮಾಜಿಕ ಸೇವೆ)
2. ಲೆ|ಕ| ವಿವೇಕ್ ಸಾಯ (ಭಾರತೀಯ ಭೂ ಸೇನಾ)
3. ಕು. ಅರ್ಪಿತಾ. ವಿ. ಎಂ (ಕ್ರೀಡೆ)
ಹವ್ಯಕ ಸೇವಾಶ್ರೀ –
1.ಶ್ರೀ ನಾರಾಯಣ ಶಾನಭಾಗ (ವಿಶ್ರಾಂತ ನಿರ್ದೇಶಕರು ಹವ್ಯಕ ಅಧ್ಯಯನ ಕೇಂದ್ರ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ಸತ್ಯಧರ್ಮ ವಿದ್ಯಾಪೀಠಕ್ಕೆ `ಕೀರ್ತಿ’ ತಂದ ತರುಣ: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಶ್ರುತಕೀರ್ತಿಗೆ ಸ್ವರ್ಣ ಪದಕ

Next Post

ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

kalpa News

kalpa News

Next Post
ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

ಅಡೆತಡೆಗಳಿಗೆ ಕುಗ್ಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ನಿವೃತ್ತ ಪೊಲೀಸ್ ಅಧಿಕಾರಿ ಮುಗಳಗೇರಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL