ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ #SSLC Result ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ #Minister Madhu Bangarappa ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಏಪ್ರಿಲ್15 ರಿಂದ ರಾಜ್ಯಾದ್ಯಂತ 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post