ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ BYVijayendra ಅವರ ಪದಗ್ರಹಣಕ್ಕೆ ಸಿದ್ದತೆಗಳು ನಡೆದಿದ್ದು, ಅಂದುಕೊಂಡಂತೆ ಆದರೆ ಮುಂದಿನ ಬುಧವಾರ ಅಥವಾ ಗುರುವಾರ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.
ದೀಪಾವಳಿ ಕಳೆದ ನಂತರ ಅಂದರೆ ಮುಂದಿನ ಬುಧವಾರ ಅಥವಾ ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದ ಕಡೆಗಳಿಂದ ಲಕ್ಷಾಂತರ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಇದಕ್ಕಾಗಿ ಸಿದ್ದತೆಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ವರದಿಯಾಗಿದೆ.
Also read: ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಉಳಿದಿತ್ತು. ಹಲವು ತಿಂಗಳುಗಳ ನಂತರ ಅಳೆದು ತೂಗಿ ಲೆಕ್ಕಾಚಾರ ಹಾಕಿರುವ ಪಕ್ಷದ ವರಿಷ್ಠರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನಿನ್ನೆ ನಿಯೋಜಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post