ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ ವಿವಾದದ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿ, ತತಕ್ಷಣ ಶಾಲಾ-ಕಾಲೇಜು ಆರಂಭಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ.
ಈ ಕುರಿತಂತೆ ಮಾಧ್ಯಮಕ್ಕೆ ಮಾತನಾಡಿರುವ ಶಿಕ್ಷಣ ಸಚಿವ ನಾಗೇಶ್, ನ್ಯಾಯಾಲಯದ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಂಜೆ ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ, ನ್ಯಾಯಾಲಯದ ಮಧ್ಯಂತರ ಆದೇಶ ಪ್ರತಿ ಸಿಕ್ಕ ನಂತರ ಅದನ್ನು ಪರಿಶೀಲನೆ ನಡೆಸಿ, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗುವುದು. ನ್ಯಾಯಾಲಯದ ಆದೇಶದ ಆಧಾರದಲ್ಲಿ ಸಭೆಯಲ್ಲಿ ಚರ್ಚೆ ನಡೆಸಿ, ಶಾಲೆ ಆರಂಭಿಸುವ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post