ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕ ಸಂತ್ರಸ್ತೆಯ ಕಿಡ್ನಾಪ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ #H D Revanna ಅವರು ಜಾಮೀನು ಪಡೆದು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್’ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ರೇವಣ್ಣ ಅವರಿಗೆ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಆಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ.
ರಾಹುಕಾಲ ಕಳೆದ ನಂತರ ಮುಹೂರ್ತ ನೋಡಿಕೊಂಡು ಜೈಲಿನಿಂದ ಬಿಡುಗಡೆಯಾಗಿರುವ ರೇವಣ್ಣ ಅವರು ಅಲ್ಲಿಂದ ನೇರವಾಗಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದರು. ಅಲ್ಲಿ ತಮ್ಮ ತಂದೆ-ತಾಯಿಯ ಆರ್ಶೀವಾದ ಪಡೆದರು.
Also read: ಶಿವಮೊಗ್ಗ | ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆ | ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ
ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ಈ ವೇಳೆ ಗೊಂದಲ ವಾತಾವರಣ ಉಂಟಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post