ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈ ಬಾರಿಯ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದು ಇಂದು ರಾಜ್ಯ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಡಿಸಿಎಂ ಹಾಗೂ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭಾರೀ ಬೃಹತ್ ಸಮಾರಂಭದಲ್ಲಿ ದೇಶದ ಗಣ್ಯವ್ಯಕ್ತಿಗಳು ಹಾಗೂ ಹಲವು ಚಿತ್ರನಟರು ಪಾಲ್ಗೊಂಡಿದ್ದರು.
ಯಾರೆಲ್ಲಾ ಚಿತ್ರನಟರು ಇದ್ದರು?
ಖ್ಯಾತ ಚಿತ್ರನಟ ಕಮಲ್ ಹಾಸನ್
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್
ಚಿತ್ರ ನಟಿ ರಮ್ಯಾ
ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ
ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ
ನಟ ದುನಿಯಾ ವಿಜಯ್
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post