ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಿಜೆಪಿ ಹೈಮಾಂಡ್ ರಾಜ್ಯದಲ್ಲಿ ಸಮರ್ಥ ನಾಯತ್ವದ ಹುಡುಕಾಟ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ನಂತರ ಯಾರು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದಾರೆ ಎಂಬ ಕುರಿತು ಗಂಭೀರ ಚಿಂತನೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಅಧಿಕಾರದಲ್ಲಿರುವ ಉತ್ತರಾಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಎರಡನೇ ಹಂತದ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿರುವ ಬಿಜೆಪಿ ಹೈಕಮಾಂಡ್ ನಾಯಕರು, ರಾಜ್ಯದಲ್ಲಿಯೂ ಭವಿಷ್ಯದಲ್ಲಿ ಪಕ್ಷವನ್ನು ಮುನ್ನಡೆಸುವವರ ಸಾಮರ್ಥ್ಯ ಮತ್ತು ಪ್ರಭಾವಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಡಾ. ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಬಿಜೆಪಿಯಲ್ಲಿ ಬಂಡಾಯ ನಾಯಕನೆಂದು ಗುರುತಿಸಿಕೊಳ್ಳುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ವರಿಷ್ಠರು ಒಲವು ಹೊಂದಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post