ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನರೇಂದ್ರ ಮೋದಿಯವರಿಗೆ #Narendra Modi ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ರಾಜಕೀಯ ಮುತ್ಸದ್ದಿತನ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ #MP Basavaraja Bommai ಹೇಳಿದ್ದಾರೆ.
ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ.

ಮೋದಿಯವರು ಬಹಳ ವಿಭಿನ್ನವಾಗಿ ರಾಜಕಾರಣ ನಡೆಸಿಕೊಂಡು ಬಂದಿದ್ದಾರೆ. ಗುಜರಾತ್ ಗಲಭೆ ನಿರ್ವಹಿಸಿಕೊಂಡು ಬಂದರು. ಬಹಳ ಪೈಪೋಟಿ ಇದ್ದರೂ ಸಂಪೂರ್ಣ ಮೆಜಾರಿಟಿ ತಂದರು. ಎರಡನೇ ಬಾರಿ ಬಹುಮತ ಹೆಚ್ಚಿಸಿ ಎನ್‌ಡಿಎ ವಿಸ್ತಾರ ಮಾಡಿದ್ದಾರೆ. ಇದೆಲ್ಲಾ ನೋಡಿದಾಗ ರಾಜಕೀಯವಾಗಿ ಮುತ್ಸದ್ದೀತನ ಮಾಡಿದ್ದಾರೆ. ಇಂಡಿ ಘಟಬಂಧನ್ ನೋಡಿದರೆ ಅಲ್ಲಿ ಯಾವುದೇ ಬೆಳವಣಿಗೆ ಇಲ್ಲ. ಕಾಂಗ್ರೆಸ್ ನಂಬಿಕೊಂಡು ಹೋಗುವ ಕೆಲಸ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು ನಾಯ್ಡು ಮಾಡುವುದಿಲ್ಲ ಎಂದರು.
ಈ ಬಾರಿ ಎನ್ ಡಿಎ ಸಾಧನೆ ಹೇಗಿದೆ ಅಂದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೋಲಿಸಿದರೆ ಈ ಬಾರಿ ಉತ್ತಮವಾಗಿದೆ. ಜಾತಿ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

ಮೋದಿ ಅವರನ್ನು ಅತ್ಯಂತ ಟೀಕೆ ಮಾಡಿದ್ದರು. ಕಾಂಗ್ರೆಸ್ ಮಿತ್ರ ಪಕ್ಷಗಳ ಹೆಗಲ ಮೇಲೆ ಕೂತು ಕೆಲಸ ಮಾಡಿದೆ. ಅವರ ಸ್ವಂತ ಬಲದಿಂದ ಅಲ್ಲ. ಮಿತ್ರ ಪಕ್ಷದ ಬಲದಿಂದ ಅಷ್ಟು ಸೀಟು ಗೆದ್ದಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮವಾಗಿದೆ. ಉತ್ತಮ ಮತಗಳು ನಮಗೆ ಬಂದಿದೆ.
Also read: ಲೋಕಾ ಸಮರದಲ್ಲಿ ಮೃಣಾಲ್ ಪರಾಭವ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫಸ್ಟ್ ರಿಯಾಕ್ಷನ್
ಜನ ಸರ್ಕಾರದ ವಿರುದ್ಧ ಬೇಸತ್ತು, ಮೈತ್ರಿ ಬೆಂಬಲಿಸಿದ್ದಾರೆ.
ಸಿದ್ದರಾಮಯ್ಯ ಮೋದಿ ಗ್ಯಾರಂಟಿ ಫೇಲ್ ಆಗಿದೆ ಎಂದು ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರಂಟಿ ನಡುವೆ ನಾವು ಸಾಧನೆ ಮಾಡಿದ್ದೇವೆ. ಇವರು ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲುವುದಾಗಿ ಹೇಳಿದ್ದರು. 9ಕ್ಕೆ ಬಂದು ನಿಂತಿದ್ದಾರೆ. ಡಿಕೆ ಬ್ರದರ್ಸ್ ಸೋತಿದ್ದಾರೆ. ಅವರಿಗೆ ಮಾತನಾಡಲು ನೈತಿಕತೆ ಇಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post