ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಮ್ಮೂರ ಮಂದಾರ ಹೂವೆ ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ Vinayak Joshi ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಸ್ಯಾಂಡಲ್’ವುಡ್’ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಜೋಶಿ ಬಣ್ಣದ ಲೋಕದಲ್ಲಿ ಮಾತ್ರವಲ್ಲ ಆರ್’ಜೆ ಹಾಗೂ ನಿರೂಪಕನಾಗಿಯೂ ಖ್ಯಾತಗಳಿಸಿದ್ದು, ಈಗ ಅವರು ಒಂದು ವಿಭಿನ್ನ ಪ್ರಯೋಗವೊಂದಕ್ಕೆ ಕೈಹಾಕಿದ್ದಾರೆ.

ಬಾಲನಟನಾಗಿ ಬಂದ ನಾನು, ನಾಯಕನೂ ಆದೆ. ಆನಂತರ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿದೆ. ಕೆಲವು ವರ್ಷಗಳ ಹಿಂದೆ ಜೋಶ್ ಲೆ ಎಂಬ ವೆಬ್ ಸಿರೀಸ್ ನಿರ್ಮಿಸಿದ್ದೆ. ಈಗ ಮೀಟರ್ ಹಾಕಿ ಪ್ಲೀಸ್ ಎಂಬ ವಿಭಿನ್ನ ವೆಬ್ ಸಿರೀಸ್ ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನು ಮಾಡಿದ್ದೇನೆ. ಆಟೋ ಚಾಲಕರ ಜೀವನ ಹಾಗೂ ಸಾಧನೆಯನ್ನು ಪರಿಚಯಿಸುವ ವೆಬ್ ಸಿರೀಸ್ ಇದಾಗಿದೆ. ಸುಮಾರು ಏಳು ಕಂತುಗಳಲ್ಲಿ ಯೂಟ್ಯೂಬ್ ಹಾಗೂ Spotify ನಲ್ಲಿ ಇದು ಪ್ರಸಾರವಾಗಲಿದೆ.

Also read: ಶಾಂತಿ ಕದಡಿದರೆ ಆರ್’ಎಸ್’ಎಸ್, ಬಜರಂಗದಳವನ್ನೂ ನಿಷೇಧಿಸುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post