ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹೆಸರಿನಲ್ಲಿ ಮೈಸೂರು ಜಿಲ್ಲಾಧಿಕಾರಿ ದೇವಾಲಯಗಳನ್ನು ಕೆಡವಿದ್ದು ತಪ್ಪು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಮೈಸೂರು ಡಿಸಿ ದೇವಾಲಯಗಳನ್ನು ಒಡೆಯಲು ಮುಂದಾಗಿದ್ದು ತಪ್ಪು. ಸುಪ್ರೀಂ ಕೋರ್ಟ್ ಆದೇಶಗಳು ಬಹಳಷ್ಟಿವೆ. ಅವೆಲ್ಲವನ್ನು ಅಧಿಕಾರಿಗಳು ಪಾಲಿಸುತ್ತಿದ್ದಾರ ಎಂದು ಕಟುವಾಗಿ ಪ್ರಶ್ನಿಸಿದ ಅವರು, ಒಂದೇ ಒಂದು ದೇವಾಲಯವನ್ನು ಮುಟ್ಟಿದ್ದು ಸಹ ದೊಡ್ಡ ತಪ್ಪು. ಜನರ ಭಾವನೆಗಳ ವಿಚಾರದಲ್ಲಿ ಅಧಿಕಾರಿಗಳು ಸೂಕ್ಷ್ಮವಾಗಿ ವರ್ತಿಸಬೇಕು. ಇಲ್ಲಿ ದೇವಾಲಯವನ್ನಷ್ಟೇ ಮುಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ ಅವರು, ಈಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕಿಂತ ದೇವಾಲಯಗಳನ್ನು ಉಳಿಸುವುದು ತಮ್ಮ ವೈಯಕ್ತಿಕ ನಿಲುವಾಗಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post