ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಹಾಗೂ ವೀಡಿಯೋ ಚಿತ್ರೀಕರಣ Photo, Video shooting ಮಾಡುವುದನ್ನು ನಿಷೇಧಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.
ಈ ಕುರಿತಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ನಿನ್ನೆ ಬೆಳಗ್ಗೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದ ನಂತರ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡು ಆದೇಶವನ್ನು ಹಿಂಪಡೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post