ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ #Heavy Rain ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಸೋಮವಾರ ಮತ್ತು ಮಂಗಳವಾರ ಬೆಳಗಾವಿ ಮತ್ತು ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಾದ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಬುಧವಾರದವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post