No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬ್ರ್ಯಾಂಡ್‌ ಬೆಂಗಳೂರು ಘೋಷಣೆ ವಾಪಸ್‌ ಪಡೆಯಿರಿ, ಇಲ್ಲವಾದರೆ ಅನುದಾನ ಬಿಡುಗಡೆ ಮಾಡಿ: ಆರ್‌. ಅಶೋಕ

ನಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಳ್ಳುವ ಡಿಸಿಎಂ ಡಿ.ಕೆ.ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 16, 2024
in ಬೆಂಗಳೂರು ನಗರ
0
ಬ್ರ್ಯಾಂಡ್‌ ಬೆಂಗಳೂರು ಘೋಷಣೆ ವಾಪಸ್‌ ಪಡೆಯಿರಿ, ಇಲ್ಲವಾದರೆ ಅನುದಾನ ಬಿಡುಗಡೆ ಮಾಡಿ: ಆರ್‌. ಅಶೋಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ #D K Shivakumar ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ ಯೋಜನೆಗೆ 5,500 ಕೋಟಿ ರೂ. ಸಾಲ ಪಡೆಯಲು ಅಂದಿನ ಬಿಜೆಪಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು. ಜೊತೆಗೆ ಕಾಮಗಾರಿ ನಡೆಸುವ ಸಂಸ್ಥೆಗಳನ್ನೂ ನಿಗದಿಪಡಿಸಲಾಗಿತ್ತು. 2019 ರ ಜನವರಿ 1 ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು. ಪ್ಯಾಕೇಜ್‌ 2 ನಲ್ಲಿ ನಿತ್ಯ 77.5 ಕೋಟಿ ಲೀಟರ್‌ ನೀರು ಶುದ್ಧೀಕರಣ ಘಟಕ, ಪ್ಯಾಕೇಜ್‌ 3 ರಲ್ಲಿ ಟಿ.ಕೆ.ಹಳ್ಳಿ ಪಂಪಿಂಗ್‌ ಘಟಕ, ಪ್ಯಾಕೇಜ್‌ 4 ರಲ್ಲಿ ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿ ಎರಡು ಪಂಪಿಂಗ್‌ ಸ್ಟೇಶನ್‌, ಪ್ಯಾಕೇಜ್‌ 7 ರಲ್ಲಿ ಟಿ.ಕೆ.ಹಳ್ಳಿ-ಹಾರೋಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 8 ರಲ್ಲಿ ಹಾರೋಹಳ್ಳಿ-ವಾಜರಹಳ್ಳಿ ಪೈಪ್‌ಲೈನ್‌, ಪ್ಯಾಕೇಜ್‌ 10 ರಲ್ಲಿ ಪಶ್ಚಿಮ ಭಾಗದಲ್ಲಿ ಪೈಪ್‌ಲೈನ್‌, ಪ್ಯಾಕೇಜ್‌ 12 ರಲ್ಲಿ ಪೂರ್ವ ಭಾಗದಲ್ಲಿ ನೆಲಮಟ್ಟದ ಜಲಾಗಾರ, ಪ್ಯಾಕೇಜ್‌ 13 ರಲ್ಲಿ ಪಶ್ಚಿಮ ಭಾಗದಲ್ಲಿ ನೆಲಮಟ್ಟದ ಜಲಾಗಾರ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು ಎಂದು ವಿವರಿಸಿದರು.
ನಂತರ ಬಂದ ಬಸವರಾಜ ಬೊಮ್ಮಾಯಿ #Basavaraja Bommai ನೇತೃತ್ವದ ಸರ್ಕಾರದಲ್ಲಿ ಕಾಮಗಾರಿ ಶೇ.80 ರಷ್ಟು ಪೂರ್ಣಗೊಂಡಿತ್ತು. ಡಿಪಿಆರ್‌, ಹಣ ಹೊಂದಿಕೆ, ಕಾಮಗಾರಿ ಆರಂಭ, ಹೀಗೆ ಎಲ್ಲವನ್ನೂ ಮುಚ್ಚಿಟ್ಟು ಹೆಸರು ತೆಗೆದುಕೊಳ್ಳುತ್ತಿದ್ದಾರೆ. ದೇವರನ್ನು ಕೂರಿಸಿ ಹೋಮವನ್ನು ನಾವು ಮಾಡಿದರೆ, ಮಂಗಳಾರತಿ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಬಂದು ಇದು ನಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ 110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಸಿದ್ದೆ. ಈಗ ಏಕಾಏಕಿ ನಾವೇ ಕಷ್ಟಪಟ್ಟಿದ್ದು ಎನ್ನುವಂತೆ ಹೇಳಿಕೊಳ್ಳುತ್ತಿದ್ದಾರೆ ಎಂದರು.

ಹಣ ವಾಪಸ್‌

ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ರಸ್ತೆ ಅಭಿವೃದ್ಧಿಗೆ 8,000 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರಲ್ಲಿ ಸುಮಾರು 50% ಕೆಲಸ ಆರಂಭವಾಗಿತ್ತು. ರಾಜಕಾಲುವೆ ಸುಧಾರಣೆಗೆ 1,600 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಡಿ.ಕೆ.ಶಿವಕುಮಾರ್‌ ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆಂದು ಹೇಳಿ ಇದೇ ಹಿಂದಿನ ಅನುದಾನಗಳನ್ನು ವಾಪಸ್‌ ಪಡೆದುಕೊಂಡರು. ಬಳಿಕ ಹೊಸದಾಗಿ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಬಿ.ಎಸ್‌. ಯಡಿಯೂರಪ್ಪನವರು ವಿಶೇಷ ಅನುದಾನವನ್ನು ಬೆಂಗಳೂರಿಗೆ ನೀಡಿದ್ದರು. ಬಳಿಕ ಪ್ರತಿ ವರ್ಷ 3-4 ಸಾವಿರ ಕೋಟಿ ರೂ. ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ವಿಶೇಷ ಅನುದಾನವಾಗಿ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದರು.
ಅನುದಾನದ ಬಗ್ಗೆ ಮಾತನಾಡಲು ಮುಂದಾದರೆ ಸಿಎಂ ಸಿದ್ದರಾಮಯ್ಯ #CM Siddaramaiah ಉಡಾಫೆ ಮಾತಾಡುತ್ತಾರೆ. ಬೆಂಗಳೂರಿಗೆ ಈಗಿನ ರಾಜ್ಯ ಸರ್ಕಾರ ಎಷ್ಟು ಅನುದಾನ ಕೊಟ್ಟಿದೆ, ಹಿಂದಿನ ಬಿಜೆಪಿ ಸರ್ಕಾರ ಎಷ್ಟು ನೀಡಿದೆ, ಕೇಂದ್ರ ಸರ್ಕಾರ ಎಷ್ಟು ಹಣ ನೀಡಿದೆ ಎಂದು ಹೋಲಿಕೆ ಮಾಡಿ ತೋರಿಸಲಿ. ಕೇಂದ್ರ ಸರ್ಕಾರದಿಂದ ತಾರತಮ್ಯ ಎಂದು ಹೇಳುತ್ತಾರೆ. ಹೀಗೆ ಹೇಳುವುದಾದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಬೆಳಗಾವಿ ಮೊದಲಾದ ನಗರಗಳಿಗೆ ತೆರಿಗೆಗೆ ಅನುಗುಣವಾಗಿ ಎಷ್ಟು ಅನುದಾನ ನೀಡಲಾಗಿದೆ ಎಂದು ತಿಳಿಸಲಿ ಎಂದು ಸವಾಲೆಸೆದರು.

ಮನಮೋಹನ್‌ ಸಿಂಗ್‌ #Manmohan Singh ಮತ್ತು ನರೇಂದ್ರ ಮೋದಿಯವರ #Narendra Modi ಆಡಳಿತವಾಧಿಯಲ್ಲಿ ಎಷ್ಟು ಅನುದಾನವನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ತಿಳಿಸಲಿ. ಅದನ್ನು ಬಿಟ್ಟು ಆಯ್ಕೆ ಮಾಡಿಕೊಂಡು ಕಾಮೆಂಟ್‌ ಮಾಡುವ ಕೆಲಸವನ್ನು ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.

http://kalpa.news/wp-content/uploads/2024/04/VID-20240426-WA0008.mp4

ಮಳೆ ಹಾನಿ, ಬ್ಯಾಂಡ್‌ ಬೆಂಗಳೂರು

ಬೆಂಗಳೂರಿನ ಬೆಳ್ಳಂದೂರು, ಮಹದೇವಪುರ ಮೊದಲಾದ ಕಡೆ ಮಳೆಯಿಂದ ಹಾನಿಯಾಗಿದೆ. ಇಂತಹ ಸಮಯದಲ್ಲೂ ಬ್ರ್ಯಾಂಡ್‌ ಬೆಂಗಳೂರು ಎನ್ನುತ್ತಿದ್ದಾರೆ. ಆದರೆ ಕೇವಲ ಸದ್ದು ಕೇಳಿಬರುತ್ತಿದ್ದು, ಬ್ರ್ಯಾಂಡ್‌ ಬದಲು ಬ್ಯಾಂಡ್‌ ಬೆಂಗಳೂರು ಆಗಿದೆ. ನಿಯಂತ್ರಣ ಕೊಠಡಿ ತೆರೆದಿದ್ದಾರೆಯೇ ಹೊರತು ಯಾವ ಕೆಲಸವೂ ಆಗಿಲ್ಲ. ಗುತ್ತಿಗೆದಾರರಿಗೆ ಬಿಲ್‌ ಬಾಕಿ ಇದೆ. ಒಂದೋ ಬ್ರ್ಯಾಂಡ್‌ ಬೆಂಗಳೂರು ಘೋಷಣೆಯನ್ನು ವಾಪಸ್‌ ಪಡೆಯಲಿ, ಇಲ್ಲವಾದರೆ ಏನು ಮಾಡುತ್ತೇವೆಂದು ಸರಿಯಾದ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.

ದೇಶ ವಿರೋಧಿಗಳ ಜೊತೆ ಚಹ

ವಿದೇಶಕ್ಕೆ ಹೋಗಿ ದೇಶದ ಮಾನ ಕಳೆಯುವ ರಾಹುಲ್‌ ಗಾಂಧಿ, ದೇಶ ವಿರೋಧಿಗಳೊಂದಿಗೆ ಚಾಯ್‌ ಪೇ ಚರ್ಚಾ ಮಾಡುತ್ತಾರೆ. ಬೆಂಗಳೂರಿಗೆ ಗಾರ್ಬೇಜ್‌ ಸಿಟಿ ಎಂಬ ಕೆಟ್ಟ ಹೆಸರನ್ನು ತಂದಿದ್ದು ಕೂಡ ಕಾಂಗ್ರೆಸ್‌ ಎಂದು ದೂರಿದರು.

ಮುಡಾ #MUDA ಅಧ್ಯಕ್ಷ ಈಗ ರಾಜೀನಾಮೆ ನೀಡಿದ್ದಾರೆ. ಏನೂ ಅಕ್ರಮ ನಡೆದಿಲ್ಲವೆಂದಾದರೆ ಈಗ ರಾಜೀನಾಮೆ ನೀಡಿದ್ದು ಏಕೆ ಎಂದು ಕಾಂಗ್ರೆಸ್‌ ಸ್ಪಷ್ಟನೆ ನೀಡಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ದಾಖಲೆ ನೀಡಿದೆ. ಇಲ್ಲಿ ನಾಗೇಂದ್ರ ಅಮಾಯಕನಾಗಿದ್ದರೆ ಅವರು ರಾಜೀನಾಮೆ ನೀಡಿದ್ದೇಕೆ, ಸಿದ್ದರಾಮಯ್ಯ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ತಿಳಿಸಬೇಕು ಎಂದು ಒತ್ತಾಯಿಸಿದರು.

ಇವಿಎಂ ಬಗ್ಗೆ ಕಾಂಗ್ರೆಸ್‌ ಟೀಕೆ ಮಾಡಿದ್ದಕ್ಕೆ ಎಲ್ಲರೂ ಛೀಮಾರಿ ಹಾಕಿದ್ದಾರೆ. ತಾವು ಗೆದ್ದರೆ ಇವಿಎಂ ಸರಿ ಇದೆ, ಸೋತರೆ ಸರಿ ಎಲ್ಲ ಎಂದು ಹೇಳುತ್ತಾರೆ. ಗೆದ್ದಾಗ ಬ್ಯಾಟರಿ ಎಷ್ಟು ಡೌನ್‌ ಆಗಿದೆ ಎಂದು ಕೂಡ ತಿಳಿಸಲಿ. ಇವಿಎಂ ಮೇಲೆ ಆರೋಪ ಮಾಡುವುದು ಬಿಟ್ಟು ಸೋಲು ಒಪ್ಪಿಕೊಳ್ಳಲಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreBasavaraja BommaiCM SiddaramaiahD K ShivakumarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaManmohan SinghMUDAnarendra modiNews_in_KannadaNews_KannadaR Ashokಆರ್. ಅಶೋಕಡಿ.ಕೆ. ಶಿವಕುಮಾರ್ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬೆಂಗಳೂರುಮನಮೋಹನ್ ಸಿಂಗ್ಮುಡಾಸಿಎಂ ಸಿದ್ದರಾಮಯ್ಯ
Share196Tweet123Send
Previous Post

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

Next Post

ಪ್ರಕೃತಿ ದೇವೋ ಭವ | ಪ್ರಕೃತಿಯಿಂದಲೇ ನಾವು ಎಂಬ ಸತ್ಯ ಅರಿಯಬೇಕಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಕೃತಿ ದೇವೋ ಭವ | ಪ್ರಕೃತಿಯಿಂದಲೇ ನಾವು ಎಂಬ ಸತ್ಯ ಅರಿಯಬೇಕಿದೆ

ಪ್ರಕೃತಿ ದೇವೋ ಭವ | ಪ್ರಕೃತಿಯಿಂದಲೇ ನಾವು ಎಂಬ ಸತ್ಯ ಅರಿಯಬೇಕಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

ಸಂತುಷ್ಟರಾಗಿ ವರಗಳನ್ನು ನೀಡುವ ಶ್ರೀ ಸತ್ಯ ಸಂತುಷ್ಟ ತೀರ್ಥರು

March 18, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL