ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಿಳೆಯೋರ್ವರಿಗೆ ತಮ್ಮ ಸಾಕು ನಾಯಿ ಕಚ್ಚಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ Actor Darshan ಬಿಗ್ ರಿಲೀಫ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಕರಣದಲ್ಲಿ ದರ್ಶನ ಪಾತ್ರವಿಲ್ಲದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ದರ್ಶನ್ ಮನೆಯ ನಾಯಿ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಅಷ್ಟಾಗಿ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.
Also read: ಡಿ.13ರಂದು ಪ್ರಾಚೀನ ದೇವಾಲಯಗಳ ಹವ್ಯಾಸಿ ವೀಕ್ಷಣಾ ಬಳಗ ಸುವರ್ಣ ಸಂಭ್ರಮ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















