ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭಾ ಚುನಾವಣೆಗೂ ಮುನ್ನ ಸ್ತ್ರೀ ಸಬಲೀಕರಣದ ಮಂತ್ರ ಪಠಿಸಿರುವ ಬಸವರಾಜ ಬೊಮ್ಮಾಯಿ CM Basavaraja Bommai ನೇತೃತ್ವದ ಬಿಜೆಪಿ ಸರ್ಕಾರ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದೆ.
ಈ ಕುರಿತಂತೆ ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ಘೋಷಿಸಿದ್ದು, 30 ಲಕ್ಷ ಮಹಿಳೆರಿಗೆ ಉಚಿತ ಬಸ್ ಪಾಸ್, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.
Also read: ಬೊಮ್ಮಾಯಿ ಬಜೆಟ್: ರಾಜ್ಯದ ದೇವಾಲಯ-ಮಠಗಳ ಜೀಣೋದ್ಧಾರಕ್ಕೆ 1 ಸಾವಿರ ಕೋಟಿ ರೂ. ಅನುದಾನ
ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರಿಗಾಗಿ ಘೋಷಣೆಯಾಗಿದ್ದು:
ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30 ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ
ಸಹಾಯಧನ 1000 ರೂ.ನಿಂದು 1500 ರೂ.ಗೆ ಏರಿಕೆ
ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ 3 ಸಾವಿರ ದಿಂದ 10 ಸಾವಿರ ರೂ. ಏರಿಕೆ
ಆ್ಯಸಿಡ್ ಸಂತ್ರಸ್ತೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ
ರಾಜೀವ್ ವಸತಿ ನಿಗಮದಿಂದ ವಸತಿ ಸೌಲಭ್ಯ
ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಘೋಷಣೆ
ಎಸ್ಸಿ/ಎಸ್ಟಿ/ ಒಬಿಸಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಗ್ರಾಚುಯಿಟಿ ನೀಡಲು 40 ಕೋಟಿ ರೂ. ಅನುದಾನ
20 ವರ್ಷ ಸೇವೆ ಪೂರೈಸಿ, ಮಾರಣಾಂತಿಕ ಕಾಯಿಲೆಯಿಂದ ಬಳಲುವ ಕಾರ್ಯಕರ್ತೆರಿಗೆ 50 ಸಾವಿರ ರೂ. ಸಹಾಯಧನ
ಸಹಾಯಕರಿಯರಿಗೆ 30 ಸಾವಿರ ರೂ. ಸಹಾಯಧನ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಸ್ವಯಂ ನಿವೃತ್ತಿಗೆ ಅವಕಾಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post