ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ Covid ಸಂದರ್ಭದಲ್ಲಿ 40 ಸಾವಿರ ಕೋಟಿ ರೂ ಹಗರಣ ನಡೆದಿದೆ ಎಂದು ತಮ್ಮ ಪಕ್ಷದ ಪ್ರಮುಖ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ Minister Sharana Patil ಗುರುವಾರ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಹಗರಣ. ಯತ್ನಾಳ್ ಬಿಜೆಪಿಯ ಅತ್ಯಂತ ಪ್ರಮುಖ ನಾಯಕರಲ್ಲಿ ಒಬ್ಬರು. ಅವರ ಯಾವ ಹೇಳಿಕೆಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ. ಪ್ರತಿಯೊಂಂದಕ್ಕೂ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಬಿಜೆಪಿ ನಾಯಕರು ಯತ್ನಾಳ್ ಆರೋಪಕ್ಕೆ ಮೌನ ವಹಿಸಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶೇ.40 ಕಮಿಷನ್ ಆರೋಪಕ್ಕೆ ಯತ್ನಾಳ್‍ರವರೇ ಸಾಕ್ಷಿ ಒದಗಿಸಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.

Also read: ಶಾಸಕ ಯತ್ನಾಳ್ ಅವರು ಬಿಜೆಪಿ ಹಗರಣದ ದಾಖಲೆ ಆಯೋಗದ ಮುಂದಿರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ AtalBihariVajapayee ಸಂಪುಟದಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಯತ್ನಾಳ್‍ರವರು ಭ್ರಷ್ಟಾಚಾರವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವ ಇಚ್ಛಾಶಕ್ತಿ ಇದ್ದರೆ ಅವರು ದಾಖಲೆಗಳನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಹಿಟ್ ಅಂಡ್ ರನ್ ಮಾಡಿದಂತಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.

(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post