ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗಥಾನ್ ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ಗಿನ್ನೆಸ್ ದಾಖಲೆ ನಿರ್ಮಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ Minister Narayana gowda ಅವರು ಹೇಳಿದರು.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ. ನಾರಾಯಣಗೌಡ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಯೋಗಥಾನ್ ಆಯೋಜಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೆಚ್ಚಿನ ಶಕ್ತಿ ತುಂಬಿರುತ್ತಾರೆ. ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ 5 ಲಕ್ಷ ಜನರು ಸೇರಿ ಆಗಸ್ಟ್ 28 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಸೇರಿ ‘ಯೋಗಥಾನ್’ ನಡೆಸಲಿದ್ದು, ಗಿನ್ನೀಸ್ ವಿಶ್ವದಾಖಲೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ಎಂಎಲ್‌ಸಿ ಗೋವಿಂದರಾಜು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎನ್‌ವೈಕೆ ನಿರ್ದೇಶಕ ನಟರಾಜ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post