ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್’ಡಿಎಲ್) ಕಾರ್ಖಾನೆಯು #KSDLFactory 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾAಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ #Minister M B Patil ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್. ನಾಡಗೌಡ ಅವರು ಹಸ್ತಾಂತರಿಸಿದರು.
ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.
ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.
ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.
ನಂತರ ಮಾತನಾಡಿದ ಮುಖ್ಯಮಂತ್ರಿಯವರು, `ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Also read: ಆಟೋ ಚಾಲಕರಿಗೆ ಎಸ್’ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ | ಸಾರ್ವಜನಿಕರಿಗೆ ಸಂದೇಶವೇನು?
ಸಚಿವ ಎಂ.ಬಿ. ಪಾಟೀಲ ಮಾತನಾಡಿ, `ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.
ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ. ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್. ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post