ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭರತನಾಟ್ಯ ಕಲಾವಿದೆ ಹಾಗೂ ನಗರದ ಪ್ರತಿಷ್ಠಿತ ಕಾನೂನು ವಿದ್ಯಾಲಯದಲ್ಲಿ ಉಪನ್ಯಾಸಕಿಯೂ ಆಗಿರುವ ವಿದುಷಿ ಶ್ರೀಮತಿ ಎಲ್.ಎಸ್. ವಾಸವಿ ಅವರ ಭರತನಾಟ್ಯ ಪ್ರದರ್ಶನವು ಸೆಪ್ಟೆಂಬರ್ 10, ಬುಧವಾರ ಸಂಜೆ 5-00ಕ್ಕೆ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ ಜರುಗಲಿದೆ.
ಇದೇ ಸಂದರ್ಭದಲ್ಲಿ ಕಲಾವಿದೆ ಮತ್ತು ಶಿಕ್ಷಕಿ ವಿದುಷಿ ವಾಸವಿ ಅವರಿಗೆ “ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷರಾದ ಶ್ರೀ ಆರ್.ಪಿ. ರವಿಶಂಕರ್ ಉಪಸ್ಥಿತರಿರುತ್ತಾರೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಸಂಸ್ಥೆಯವರು ವಿನಂತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post