ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಸ್ವಾಮಿ ಹತ್ಯೆ ಪ್ರಕರಣ #Renukaswamy Murder Case ಸಂಬಂಧ ನಟ ದರ್ಶನ್ ಗೆ #Darshan 21 ದಿನ ರಿಲೀಫ್ ಸಿಕ್ಕಿದ್ದು, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.
ಬೆಂಗಳೂರು ನಗರ ಪೊಲೀಸರು ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಹೈಕೋರ್ಟ್ #High Court ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್ #Supreme Court ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮಹದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ವಕೀಲರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post