ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸಹಕಾರ್ಯವಾಹ)ಯಾಗಿ ಹಿರಿಯರಾದ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಆರ್’ಎಸ್’ಎಸ್ ಅಧಿಕೃತ ಘೋಷಣೆ ಮಾಡಿದ್ದು, ಸಂಘ ಪರಿವಾರದ ಎರಡನೆಯ ಅತ್ಯುನ್ನತ ಜವಾಬ್ದಾರಿಯನ್ನು ಹೊಸಬಾಳೆಯವರಿಗೆ ವಹಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರಿನ ಹೊರ ವಲಯದಲ್ಲಿರುವ ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಆರ್’ಎಸ್’ಎಸ್’ನ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ದಲ್ಲಿ ದತ್ತಾತ್ರೇಯ ಹೊಸಬಾಳೆಯವರು ಆಯ್ಕೆಯಾಗಿದ್ದಾರೆ.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
ಮೋಹನ್ ಭಾಗ್ವತ್ ಅವರು ಆರ್’ಎಸ್’ಎಸ್’ನ ಸರಸಂಘಚಾಲಕ್ ಆಗಿ ಸೇವೆ ಸಲ್ಲಿಸುತ್ತಿದ್ದು, 2009 ರಿಂದ ಈವರೆಗೂ ಸುರೇಶ್ ಭೈಯ್ಯಾಜಿ ಜೋಷಿಯವರು ಸರಕಾರ್ಯವಾಹರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 20ರಂದು ನಡೆದ ಚುನಾವಣೆಯಲ್ಲಿ ದತ್ತಾತ್ರೇಯ ಹೊಸಬಾಳೆಯವರು ಸುರೇಶ್ ಭೈಯ್ಯಾಜಿ ಜೋಷಿ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.
ದತ್ತಾತ್ರೇಯ ಹೊಸಬಾಳೆ ಅವರ ಕುರಿತು
1970 ರಲ್ಲಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪಿಯುಸಿ ತೇರ್ಗಡೆ, 74ರಲ್ಲಿ ಪದವಿ ತೇರ್ಗಡೆ, 1975 ರಲ್ಲಿ ಜಯಪ್ರಕಾಶ್ ನಾರಾಯಣ್ ರವರ ನವನಿರ್ಮಾಣ ಆಂದೋಲನಕ್ಕೆ ಸೇರ್ಪಡೆಗೊಂಡು 1977 ರಲ್ಲಿ ತುರ್ತು ಪರಿಸ್ಥಿತಿ ನಂತರ ಸ್ನಾತಕೋತ್ತರ ಪದವಿ ಪಡೆದರು.
1977-78 ರಲ್ಲಿ ಎಬಿವಿಪಿ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಅವರು, 1978 ರಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡರು. 1982 ರ ನಂತರ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿ, 1985 ರಲ್ಲಿ ವಿಶ್ವ ವಿದ್ಯಾರ್ಥಿ ಮತ್ತು ಯುವ ವೇದಿಕೆ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.
1986-91 ರಲ್ಲಿ ಎಬಿವಿಪಿಯ ದಕ್ಷಿಣ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾಗಿ, 1991-92 ರಲ್ಲಿ ಸಹಸಂಘಟನಾ ಕಾರ್ಯದರ್ಶಿ 1992 ರಿಂದ 10 ವರ್ಷದವರೆಗೆ ಎಬಿವಿಪಿ ಅಖಿಲ ಭಾರತ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
2003 ರಲ್ಲಿ ಅಖಿಲ ಭಾರತ ಸಹ ಭೌದ್ಧಿಕ್ ಪ್ರಮುಖ್ ಆಗಿ, 2009 ರಲ್ಲಿ ಆರ್’ಎಸ್’ಎಸ್’ನ ಸಹ ಸರಸಂಘ ಕಾರ್ಯವಾಹ (ಜಂಟಿ ಪ್ರಧಾನ ಕಾರ್ಯದರ್ಶಿ)ಯಾಗಿ ಸೇವೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post