ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಸಿಎಂ, ಹಾಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ D V Sadananda Gowda ಕೈತಪ್ಪಿದ್ದು, ಅವರು ಭಾವನಾತ್ಮಕವಾಗಿ ವಿದಾಯ ಹೇಳಿದ್ದಾರೆ.
— Sadananda Gowda ( Modi Ka Parivar ) (@DVSadanandGowda) March 13, 2024
ಈ ಕುರಿತಂತೆ ಅಮಿತ್ ಶಾ Amith Shah ಅವರು ಕರೆ ಮಾಡಿ, ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸದಾನಂದ ಗೌಡರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂದುಗಳೇ, ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಸಂಸದನಾಗಿ ನಿಮ್ಮ ಕೆಲಸ ಮಾಡುವ ಅವಕಾಶ ಮಾಡಿಕೊಟ್ಟು ಆರ್ಶೀವಾದವನ್ನು ಮಾಡಿದ್ದೀರಿ ಎಂದು ಹೇಳಿದ್ದಾರೆ.
Also read: ಪ್ರತಾಪ್ ಸಿಂಹ ಕೈ ತಪ್ಪಿದ ಟಿಕೇಟ್ | ಮೈಸೂರಿನಿಂದ ಯದುವೀರ ಒಡೆಯರ್ ಕಣಕ್ಕೆ
ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನ ಮಾಡಿz್ದೆÃನೆ. ನಿಮ್ಮ ಆರ್ಶೀವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಸಹ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post